ಬಡ್ತಿ ಮೀಸಲಾತಿ ವಿಳಂಬ ಆಂದೋಲನಕ್ಕೆ ಕರೆ

ಬೆಂಗಳೂರು, ಆ. ೨೯- ಬಡ್ತಿ ಮೀಸಲಾತಿ ಕಾಯ್ದೆ ಅನುಷ್ಠಾನಕ್ಕೆ ವಿಳಂಬ ನೀತಿ ಅನುಸರಿಸುತ್ತಿರುವ ಸಮ್ಮಿಶ್ರ ಸರ್ಕಾರದ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಜನಾಂದೋಲನಕ್ಕೆ ಕರೆ ನೀಡಿದೆ.
ಬಡ್ತಿ ಮೀಸಲಾತಿ ಕಾಯ್ದೆ ಅನುಷ್ಠಾನಗೊಳಿಸಲು ದಲಿತ ಸಂಘಟನೆಗಳ ಒಕ್ಕೂಟ ಈಗಾಗೇಲ ಹಲವಾರು ಹೋರಾಟಗಳನ್ನು ನಡೆಸಿದೆ. ಮುಖ್ಯಮಂತ್ರಿಗಳೊಂದಿಗೂ ಸುದೀರ್ಘ ಚರ್ಚೆ ನಡೆಸಲಾಗಿದೆ.
ಮುಖ್ಯಮಂತ್ರಿಗಳು ಈ ಸಂಬಂಧ ನ್ಯಾಯಾಲಯದಿಂದ ತೀರ್ಪು ಹೊರಬೀಳದಿದ್ದರೆ, ಕಾಯ್ದೆ ಅನುಷ್ಠಾನಗೊಳಿಸುವುದಾಗಿ ಆಗಸ್ಟ್ 28ಕ್ಕೆ ವಿಚಾರಣೆ ಮುಂದೂಡಲಾಗಿತ್ತು. ನಂತರ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಲಾಗಿದೆ. ವಿಚಾರಣೆವರೆಗೆ ಕಾಲಾವಕಾಶ ನೀಡುವಂತೆ ಮುಖ್ಯಮಂತ್ರಿಗಳು ಕೇಳಿದ್ದಾರೆ. ವಿಚಾರಣೆಯ ನೆಪದಲ್ಲಿ ಬಡ್ತಿ ಮೀಸಲಾತಿ ಕಾಯ್ದೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ವಿಚಾರಣೆ ನೆಪ ಹೇಳುತ್ತಿದೆ ಎಂದು ಒಕ್ಕೂಟದ ಮುಖಂಡ ಡಾ.ಎಂ. ವೆಂಕಟಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಂತರ ಇದುವರೆಗೂ ಬಡ್ತಿ ಮೀಸಲಾತಿ ಕಾಯ್ದೆ ಅನುಷ್ಠಾನಕ್ಕೆ ಸಾಕಷ್ಟು ಕಾಲಾವಕಾಶ ನೀಡಲಾಗಿದೆ. ಮುಖ್ಯಮಂತ್ರಿಗಳು ಕಾಯ್ದೆ ಅನುಷ್ಠಾನ ಮಾಡುವುದಿಲ್ಲವೆನ್ನುವುದು ಖಾತ್ರಿಯಾಗಿದೆ. ಕಾರಣ ರಾಜ್ಯ ಸರ್ಕಾರದ ಸಚಿವರು ಹಾಗೂ ಶಾಸಕರನ್ನು ಕಂಡಲ್ಲಿ ಘೇರಾವ್ ಮಾಡಲಾಗುವುದು. ಮುಖ್ಯಮಂತ್ರಿ ಸದನ ನಿಂದನೆ ಮಾಡಿದ್ದಾರೆಂದು ರಾಜೀನಾಮೆಗೆ ಒತ್ತಾಯಿಸಲಾಗುವುದು. ದಲಿತ ಜನಾಂಗವನ್ನು ಕಡೆಗಣಿಸುತ್ತಿರುವ ನಿಟ್ಟಿನಲ್ಲಿ ಹೋರಾಟ ಆರಂಭಿಸಲಾಗುವುದೆಂದು ತಿಳಿಸಿದರು.
ದೌರ್ಜನ್ಯ ತಡೆ ಕಾಯ್ದೆಯನ್ನು ಕೇಂದ್ರ ಸರ್ಕಾರ ಕಾಯ್ದೆ ಮೂಲ ಸ್ವರೂಪ ಹೊಸ ಮಸೂದೆಯನ್ನು ಅಂಗೀಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಈ ವೇಳೆ ಅವರು ಸ್ವಾಗತಿಸಿದರು.
ವೇದಿಕೆಯಲ್ಲಿ ಅನಂತರಾಯಪ್ಪ, ಸಿ.ಎಸ್. ರಘು,  ಕೇಶವ ಮೂರ್ತಿ, ಸೋರಾ ಹುಣಸೆ ವೆಂಕಟೇಶ್, ಮತ್ತಿತರರು ಉಪಸ್ಥಿತರಿದ್ದರು.

Leave a Comment