ಬಡ‌ವರ ಬಂಧು ಯೋಜನೆ ಅನುಷ್ಠಾನಕ್ಕೆ ಸೂಚನೆ

ಧಾರವಾಡ,ಡಿ 7- ಸರಕಾರದ ಬಡವರ ಬಂಧು ಯೋಜನೆಯ ಅನುಷ್ಠಾನ ಕುರಿತ ಪೂರ್ವಭಾವಿ ಸಭೆಯು ಗುರುವಾರ ಇಲ್ಲಿನ ಕರ್ನಾಟಕ ಕೋ-ಆಪ್ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಜರುಗಿತು.
ಸಭೆಯ ಅಧ್ಯಕ್ಷತೆವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಬಾಪುಗೌಡ ಪಾಟೀಲ ಮಾತನಾಡಿ, ಸರಕಾರ ಬೀದಿ ಬದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಗಳಿಗೆ ಕಿರು ಸಾಲ ವಿತರಿಸುವ ಸಲುವಾಗಿ ಬಡವರ ಬಂಧು ಯೋಜನೆಯನ್ನು ಜಾರಿಗೊಳಿಸಿದೆ. ಜಿಲ್ಲಾ ಮಧ್ಯವರ್ತಿ ಬ್ಯಾಂಕು ಮತ್ತು ಪಟ್ಟಣ ಸಹಕಾರಿ ಬ್ಯಾಂಕುಗಳ ಮೂಲಕ ಹಣಕಾಸು ನೆರವು ನೀಡಲು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕುಗಳ ಅರ್ಹ ಫಲಾನುಭವಿಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಬೇಕು. ಜೊತೆಗೆ ವಿತರಿಸಿದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿಕೊಳ್ಳುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಇದಕ್ಕಾಗಿ ಸಂಚಾರಿ ಸೇವೆಯನ್ನು ಆರಂಭಿಸಬೇಕು.ಈ ಮೂಲಕ ನಿಗದಿಪಡಿಸಿದ ಗುರಿ ತಲುಪಬೇಕು ಎಂದು ಸೂಚಿಸಿದರು.
ಸಹಕಾರ ಸಂಘಗಳ ಉಪ ನಿಬಂಧಕರಾದ ಸಾವಿತ್ರಿ ಕಡಿ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಕಲಾ ಪಾಳೇದ, ಪ್ರಧಾನ ವ್ಯವಸ್ಥಾಪಕ ಎ.ಡಿ.ಮದ್ನೂರ, ವಿವಿಧ ಪಟ್ಟಣ ಸಹಕಾರಿ ಬ್ಯಾಂಕುಗಳ ಪ್ರತಿನಿಧಿಗಳು ಮತ್ತು ಬ್ಯಾಂಕಿನ ಅಧಿಕಾರಿಗಳು ಸಭೆಯಲ್ಲಿದ್ದರು.

Leave a Comment