ಬಳ್ಳಾರಿ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಬಳ್ಳಾರಿ, ಮಾ.19: ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಯೋಜಿಸಿರುವ ಬಳ್ಳಾರಿ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯ್ತಿಯ ಹಂಗಾಮಿ ಅಧ್ಯಕ್ಷೆ ಶ್ರೀಮತಿ ಪಿ.ದೀನಾ ಮಂಜುನಾಥ್ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಮ್ಮೇಳನಾಧ್ಯಕ್ಷರಾದ ಸಾಹಿತಿ ಮತ್ತು ಸಂಶೋಧಕ ವೈ.ಹನುಮಂತರೆಡ್ಡಿ, ನಿಕಟಪೂರ್ವ ಅಧ್ಯಕ್ಷರಾದ ಟಿ.ಗುರುರಾಜ ಆಚಾರ್, ಕಸಾಪ ತಾಲೂಕು ಘಟಕದ ಅಧ್ಯಕ್ಷ ಕೆ.ಸುಂಕಪ್ಪ, ಕಸಾಪ ಜಿಲ್ಲಾಧ್ಯಕ್ಷ ಸಿದ್ದರಾಮಕಲ್ಮಠ್, ಕರ್ನಾಟಕ ಇತಿಹಾಸ ಅಕಾಡಮಿಯ ಅಧ್ಯಕ್ಷ ಡಾ|| ದೇವರಕೊಂಡಾರೆಡ್ಡಿ, ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಅಧ್ಯಕ್ಷ ಜಿ.ಕೃಷ್ಣ, ಮಹಾನಗರ ಪಾಲಿಕೆಯ ಉಪಮೇಯರ್ ಬೆಣಕಲ್ ಬಸವರಾಜ್ ಗೌಡ, ಮುಖಂಡರಾದ ಕಲ್ಲುಕಂಭ ಪಂಪಾಪತಿ, ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷ ಎಂ.ಟಿ.ಮಲ್ಲೇಶ್, ಕಸಾಪ ಜಿಲ್ಲಾ ಉಪಾಧ್ಯಕ್ಷ ರಮೇಶ್ ಗೌಡ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Comment