ಬಸ್ ಡಿಕ್ಕಿ: ಪಾದಾಚಾರಿ ಮೃತ್ಯು

ಕೋಟ, ಜೂ.೨೦- ಹೊಂಬಾಡಿ ಜಿ.ಕೆ.ನಗರ ಎಂಬಲ್ಲಿ ಜೂ.೧೯ರಂದು ಬೆಳಗ್ಗೆ ೮:೨೫ರ ಸುಮಾರಿಗೆ ಕೆಎಸ್‌ಆರ್‌ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಮಾಧವ ಮಹಾದೇವ ಪೂಜಾರಿ ಎಂದು ಗುರುತಿಸಲಾಗಿದೆ. ತನ್ನ ಮೊಮ್ಮಗನನ್ನು ಶಾಲೆಗೆ ಬಿಡಲು ರಸ್ತೆಯ ಬದಿ ನಿಂತಿದ್ದ

ಮಾಧವ ಅವರಿಗೆ ಹಾಲಾಡಿ ಕಡೆಯಿಂದ ಕೋಟೇಶ್ವರ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment