ಬಸ್ ಪಾಸ್ ಗಾಗಿ ಪ್ರತಿಭಟನೆ

ದಾವಣಗೆರೆ, ಆ. 10 – ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ಶ್ರೀರಾಮಸೇನೆಯ ವಿದ್ಯಾರ್ಥಿ ಸೇನಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದು ಜಯದೇವವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ನಗರಕ್ಕೆ ಅನೇಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಆಗಮಿಸುತ್ತಾರೆ. ಅವರ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಸರ್ಕಾರ ಉಚಿತ ಬಸ್ ಪಾಸ್ ನೀಡಬೇಕು.ಆದರೆ ಮುಖ್ಯಮಂತ್ರಿಗಳು ಬಸ್ ಪಾಸ್ ವಿತರಿಸುವಲ್ಲಿ ಹಿಂದೇಟು ಹಾಕುತ್ತಿರುವುದು ಖಂಡನೀಯ. ಈ ಕೂಡಲೇ ಎಲ್ಲಾ ಜನಾಂಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು. ಪರಶುರಾಮ್ ನಡುಮನಿ, ಅಭಿಷೇಕ್ ಎನ್ ರಾವ್ ನೇತೃತ್ವದಲ್ಲಿ ಅನೇಕ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿದ್ದರು.

Leave a Comment