ಬಾಲಕನಿಗೆ ಲೈಂಗಿಕ ಕಿರುಕುಳ

ತಲೆಮರೆಸಿದ್ದ ಆರೋಪಿ ಸೆರೆ
ಸುಳ್ಯ, ಆ.೨೨- ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ವ್ಯಕ್ತಿಯನ್ನು ಬಂಧಿಸಿದ ಘಟನೆ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿಯ ಚಾರ್ಮಾಡಿಯ ಬೀಟಿಕೆ ನಿವಾಸಿ ಮಹಮ್ಮದ್ ರಫೀಕ್(೩೩) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ೨೯ ಮೇ ೨೦೧೮ರಂದು ದಾಖಲಾಗಿತ್ತು. ಕಳೆದ ಮೂರು ತಿಂಗಳಿನಿಂದ ಈತ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಬೆಳ್ಳಾರೆಯ ಸಮೀಪ ಬಂಧಿಸಲಾಗಿದೆ. ಕಾರ್ಯಾಚರಣೆಯಲ್ಲಿ ಪಿಐ ಡಿಸಿಐಬಿ ಸುನೀಲ್ ವೈ ನಾಯಕ್ ಅವರ ನಿರ್ದೇಶನದಂತೆ ಉದಯ ಗೌಡ, ಪ್ರವೀಣ್ ರೈ ಅವರು ಭಾಗವಹಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಮುಂದಿನ ತನಿಖೆಗಾಗಿ ಧರ್ಮಸ್ಥಳ ಠಾಣೆಗೆ ಹಸ್ತಾಂತರಿಸಲಾಗಿದೆ.

Leave a Comment