ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಜಾಥಾ

ತುಮಕೂರು, ಜೂ. ೧೨- ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಜಾಥಾವನ್ನು ನಗರದಲ್ಲಿ ನಡೆಸಲಾಯಿತು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ ಹೊರಟ ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ರಾಜೇಂದ್ರ ಬಾದಾಮಿಕರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಜಾಥಾವು ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟ ಜಾಥಾವು ಎಂ.ಜಿ. ರಸ್ತೆ, ಅಶೋಕ ರಸ್ತೆ ಮೂಲಕ ಸಂಚರಿಸಿತು.
ಜಾಥಾದಲ್ಲಿ ಪಾಲ್ಗೊಂಡಿದ್ದ ವಿವಿಧ ಶಾಲೆಗಳ ಮಕ್ಕಳು ಬಾಲ ಕಾರ್ಮಿಕ ಪದ್ದತಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ನಂತರ ಜಾಥಾವು ಡಾ. ಗುಬ್ಬಿ ವೀರಣ್ಣ ರಂಗಮಂದಿರ ತಲುಪಿತು.

ಜಾಥಾದಲ್ಲಿ ಡಿ.ಹೆಚ್.ಓ. ಡಾ. ರಂಗಸ್ವಾಮಿ, ನ್ಯಾ. ಜಿನರಾಳ್ಕರ್, ಕಾರ್ಮಿಕ ಅಧಿಕಾರಿ ಚಂದ್ರಶೇಖರ್ ಐ.ಟಿ., ರವಿಕುಮಾರ್ ಮತ್ತಿತರರು ಭಾಗವಹಿಸಿದ್ದರು.

Leave a Comment