ಬಾಲಕಿಯ ಅತ್ಯಾಚಾರಕ್ಕೆ ಯತ್ನ ಕಾಮುಕನ ಬೆತ್ತಲೆ ಮೆರವಣಿಗೆ

ನಾಗ್ಪುರ, ಡಿ.೨- ನಾಲ್ಕರ ಹರೆಯದ ಬಾಲಕಿಯನ್ನು ಅತ್ಯಾಚಾರ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಯಾಗಿ ಮೆರವಣಿಗೆಯಲ್ಲಿ ಕೊಂಡೊಯ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ೩೫ ವರ್ಷದ ವ್ಯಕ್ತಿ ಮನೆಯಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ, ವ್ಯಕ್ತಿಯನ್ನು ಜವಾಹರ್ ವೈದ್ಯ ಎಂದು ಗುರುತಿಸಲಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಆತನನ್ನು ಥಳಿಸಿ ರಸ್ತೆಯಲ್ಲಿ ಬೆತ್ತಲೆಯಾಗಿ ಮೆರವಣಿಗೆ ನಡೆಸಿದ್ದಾರೆ.
ವೈದ್ಯ ಕಲೆಕ್ಷನ್ ಏಜೆಂಟ್ ಆಗಿ ಕೆಲಸ ಮಾಡಿಕೊಂಡಿದ್ದ, ಬಾಲಕಿ ಮನೆಯಲ್ಲಿ ಒಬ್ಬಳೇ ಇರುವುದು ತಿಳಿದು ಆಕೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದ, ತಕ್ಷಣ ಆಕೆ ಪೋಷಕರು ಮನೆಗೆ ಬಂದಿದ್ದಾರೆ. ಆತನನ್ನು ನೋಡಿ ಕೂಗಿಕೊಂಡಿದ್ದಾರೆ ಆಗ ಅಕ್ಕಪಕ್ಕದ ಮನೆಯವರು ಬಂದು ಆತನ ಕೈಯಿಂದ ಬಾಲಕಿಯನ್ನು ಬಿಡಿಸಿ. ಥಳಿಸಿ ಕೊನೆಗೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.

Leave a Comment