ಬಾಲಕಿಯ ಮಾನಭಂಗ ಯತ್ನ ಪೋಕ್ಸೋ ಕಾಯ್ದೆಯಡಿ ಆರೋಪಿ ಸೆರೆ

ಮಂಗಳೂರು, ನ.೧೧- ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದಲ್ಲಿ ಬಾಲಕಿಯ ಮಾನಭಂಕ್ಕೆ ಯತ್ನಿಸಿದ ಆರೋಪದ ಮೇಲೆ ಅಮೃತ್(೨೬) ಎಂಬಾತನನ್ನು ಪೊಲೀಸರು ಪೋಕ್ಸೋ ಕಾಯಿದೆಯಡಿ ಬಂಧಿಸಿದ್ದಾರೆ.

ಆರೋಪಿ ಅಮೃತ್ ನ.೫ರ ರಾತ್ರಿ ರೆಖ್ಯಾ ಗ್ರಾಮದ ಬಾಲಕಿಯೋರ್ವಳನ್ನು ಪುಸಲಾಯಿಸಿ ಮನೆಯ ಸಮೀಪದ ಗುಡ್ಡಕ್ಕೆ ಕರೆದುಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿರುವುದಾಗಿ ಆಕೆಯ ಹೆತ್ತವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Comment