ಬಾಲಿವುಡ್ ನಟ ದಿಲೀಪ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ

ಮುಂಬೈ.ಸೆ.೬- ಎದೆ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ಖ್ಯಾತ ನಟ ದಿಲೀಪ್ ಕುಮಾರ್ ಅವರು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ದಿಲೀಪ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ವೈದ್ಯಕೀಯ ವರದಿಯ ಪ್ರಕಾರ ಅವರ ಎದೆಯಲ್ಲಿ ಸಣ್ಣ ಸಮಸ್ಯೆಯಾಗಿದ್ದು, ತಜ್ಞ ವೈದ್ಯರ ತಂಡ ಸೂಕ್ತ ಚಿಕಿತ್ಸೆ ನೀಡುತ್ತಿದೆ. ಶೀ.ಘ್ರ ಅವರು ಗುಣಮುಖರಾಗಲಿದ್ದಾರೆ ಎಂದು ದಿಲೀಪ್ ಪತ್ನಿ ಸಾಯಿರಾ ಬಾನು ತಿಳಿಸಿದ್ದಾರೆ.

ದಾದಾ ಸಾಹೇಬ್ ಫಾಲ್ಕೆ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ೯೫ ವರ್ಷದ ನಟ ದಿಲೀಪ್ ಅವರನ್ನು ಬುಧವಾರ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅವರ ಅನಾರೋಗ್ಯದ ವಿಚಾರವನ್ನು ಅವರ ಸಂಬಂಧಿ ಫೈಸಲ್ ಫಾರೂಕಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬಹಿರಂಗಪಡಿಸಿದ್ದರು.

Leave a Comment