ಬಿಎಸ್‌ಎಫ್ ದಾಳಿಗೆ ಉಗ್ರ ಬಲಿ

ಮುಂಬೈ, ಜು ೧೨- ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿವೆ. ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಇನ್ನೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ಕಾಂಡಿ ಅರಣ್ಯ ಪ್ರದೇಶದಲ್ಲಿ ಗಡಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ, ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ, ತಕ್ಷಣ ಸೇನಾ ಪಡೆ ನಡೆಸಿದ ಪ್ರತಿ ದಾಳಿಯಲ್ಲಿ ಓರ್ವ ಭಯೋತ್ಪಾದಕ ಹತನಾಗಿದ್ದಾನೆ. ಎರಡೂ ಕಡೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ತೀವ್ರವಾಗಿ ಗಾಯಗೊಂಡಿದ್ದಾನೆ.

Leave a Comment