ಬಿಕ್ಕಟ್ಟು ಒಪ್ಪಿಕೊಂಡ ಸತೀಶ್ ಜಾರಕಿಹೊಳಿ

ಬೆಂಗಳೂರು, ಸೆ. ೧೨- ರಾಜ್ಯ ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯಗಳಿರುವುದು ನಿಜ. ಅದನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇದುವರೆಗೆ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಚಿವ ಡಿಕೆಶಿ ಅವರು ಬೆಳಗಾವಿ ಜಿಲ್ಲೆ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ದೂರಿದರು.

ಕೆಲವು ವರ್ಗಾವಣೆ ಹಾಗೂ ನೇಮಕಾತಿಯಲ್ಲಿ  ಫೋನ್ ಕೂಡ ಮಾಡಿಲ್ಲ. ಅವರೇ ನೇರವಾಗಿ ದೂರವಾಣಿ ಮಾಡುವ ಮೂಲಕ ಭಾಗಿಯಾಗಿದ್ದಾರೆ. ನಮ್ಮ ಜಿಲ್ಲೆಯ ಬಗ್ಗೆ ನಮ್ಮನ್ನು ಕೇಳಬಹುದಿತ್ತು. ಹೊಂದಾಣಿಕೆ ಮಾಡಿಕೊಂಡು ಬರೋದಾದರೆ ಬರಲಿ ಎಂದು ಸತೀಶ್ ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ತಂದೆ ಸಮಾನರು. ರಾಜಕೀಯ ಗುರುಗಳು ಅವರ ಸೂಚನೆಯಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿದ ಸತೀಶ್ ಜಾರಕಿಹೊಳಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ನಾಯಕರು ಎಂದರು.

ನಿನ್ನೆ ಶಾಸಕರಾದ ಸುಧಾಕರ್ ಹಾಗೂ ಎಂಟಿಬಿ ನಾಗರಾಜ್ ನಮ್ಮನ್ನು ಭೇಟಿ ಮಾಡಿದ್ದರು. ಅದಕ್ಕೆ ಅನಗತ್ಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದರು.

ಬೆಳಗಾವಿ ಜಿಲ್ಲೆ ವಿಷಯದಲ್ಲಿ  ಜಿಲ್ಲೆಯ ಹಿರಿಯ ನಾಯಕರೊಂದಿಗೆ ಡಿಕೆಶಿ ಚರ್ಚೆ ನಡೆಸಬೇಕು. ಡಿಕೆಶಿ ಅವರು ಮಾತುಕತೆಗೆ ಬಂದರೆ ನಾವು ಸಿದ್ಧ. ಅವರು ಇದುವರೆಗೆ ಫೋನ್ ಮಾಡಿಲ್ಲ ಎಂದು ಸತೀಶ್ ಹೇಳಿದರು.

Leave a Comment