ಬಿಜೆಪಿಯ ಬಣ್ಣ ಬಯಲಾಗಿದೆ : ಎಚ್ ಡಿಕೆ

ಬೆಂಗಳೂರು, ಜೂ.16: ರಾಜ್ಯದ ಅಭಿವೃದ್ಧಿ ಕುರಿತು ಚರ್ಚೆಗೆ ಆಹ್ವಾನಿಸಿ ಪತ್ರವನ್ನು ಸಚಿವ ಸಂಪುಟದ ಸಹೋದ್ಯೋಗಿ ವೆಂಕಟರಾವ್ ನಾಡಗೌಡ ಅವರ ಮೂಲಕ ಮಾನ್ಯ ವಿರೋಧಪಕ್ಷದ ನಾಯಕರಿಗೆ ಕಳುಹಿಸಿದ್ದೆ.ಅವರು ಚರ್ಚೆಗೆ ಸಮಯ ಕೋರಬಹುದು ಎಂದು ನಿರೀಕ್ಷಿಸಿದ್ದೆ.ಆದರೆ ಬಿಜೆಪಿಯ ನಿಜ ಬಣ್ಣ ಬಯಲಾಗಿದೆ. ಅವರಿಗೆ ಬೇಕಿರುವುದು ಕೇವಲ ಅಗ್ಗದ ಪ್ರಚಾರ, ಅಭಿವೃದ್ಧಿ ಆಧಾರಿತ ಚರ್ಚೆಯಲ್ಲ ಎಂದು ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಜಿಂದಾಲ್ ಸಂಸ್ಥೆಗೆ ಭಾರೀ ಪ್ರಮಾಣದಲ್ಲಿ ಜಮೀನು ಹಸ್ತಾಂತರಿಸುವ ಮೂಲಕ ಭಾರೀ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಿ , ರಾಜ್ಯದ ಮೈತ್ರಿ ಸರ್ಕಾರದ ನಿಲುವು ಖಂಡಿಸಿ ಮುಖ್ಯಮಂತ್ರಿಗಳ ನಿವಾಸಕ್ಕೆ ಬಿಜೆಪಿ ನಾಯಕರು ಮುತ್ತಿಗೆ ಹಾಕಲು ಯತ್ನಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಎಚ್ ಡಿಕೆ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

Leave a Comment