ಬಿಜೆಪಿ ಅಧಿಕಾರಕ್ಕೆ ಬರದಂತೆ ತಡೆಯಲು ಎಲ್ಲಾ ತ್ಯಾಗಕ್ಕೂ ಸಿದ್ಧ – ಅಜಾದ್

ಪಾಟ್ನಾ, ಮೇ ೧೬- ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾವುದೇ ತ್ಯಾಗಕ್ಕೂ ಕಾಂಗ್ರೆಸ್ ಸಿದ್ಧ ಎಂದು ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನ ಮಂತ್ರಿ ಹುದ್ದೆ ಸಿಗದಿದ್ದರೆ, ಈ ಬಗ್ಗೆ ಯಾವುದೇ ತೊಂದರೆಯಿಲ್ಲ. ಆದರೆ ಎನ್‌ಡಿಎ ಅಧಿಕಾರಕ್ಕೆ ಬರುವುದನ್ನು ತಡೆಯಲು ಕಾಂಗ್ರೆಸ್ ಪ್ರಧಾನಿ ಹುದ್ದೆಯನ್ನು ಬಿಟ್ಟುಕೊಡಲು ಸಿದ್ಧವಿದೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಯಾವೊಂದು ಪಕ್ಷಕ್ಕೂ ಸ್ಪಷ್ಟ ಬಹುಮತ ಬರದೆ ಅತಂತ್ರ ಲೋಕಸಭೆ ನಿರ್ಮಾಣವಾದರೆ, ಅಂತಹ ವೇಳೆ ಪ್ರಧಾನಿ ಹುದ್ದೆಗೆ ಕಾಂಗ್ರೆಸ್ ಪಟ್ಟುಹಿಡಿಯುವುದಿಲ್ಲ. ಈಗಾಗಲೇ ಪಕ್ಷ ಈ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬಂದಿದ್ದು, ಎಲ್ಲರೂ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಇತರೆ ಯಾವುದೇ ಪ್ರಾದೇಶಿಕ ಪಕ್ಷಗಳ ನಾಯಕರನ್ನು ಅಧಿಕಾರಕ್ಕೆ ಕೂರಿಸಲು ಕಾಂಗ್ರೆಸ್ ಸಿದ್ಧವಿದೆ ಎಂದು ಹೇಳಿದರು.

ಫಲಿತಾಂಶ ಪ್ರಕಟವಾಗುವ ಮುನ್ನವೇ ಎಲ್ಲಾ ಪ್ರಾದೇಶಿಕ ನಾಯಕರೊಂದಿಗೆ ಈಗಾಗಲೇ ಚರ್ಚೆ ನಡೆಸಲಾಗುತ್ತಿದೆ ಎಂದು ಹೇಳಿದರು.

Leave a Comment