ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ

ಧಾರವಾಡ, ಮೇ 16- ಪ್ರತಿಷ್ಠೆಯ ಕಣವಾಗಿದ್ದ ಧಾರವಾಡ ೭೧ ಮತಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಅಮೃತ ದೇಸಾಯಿ ಅವರ ಗೆಲವಿನ ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಚ್ಚು- ಲಾಂಗಿನಿಂದ ಹಲ್ಲೆ ಮಾಡಿದ ಘಟನೆ ತಡವಾಗಿ ಬಳಕೆಗೆ ಬಂದಿದೆ.
ಗರಗ ಪೊಲೀಸ್ ಠಾಣೆ ವ್ಯಾಪ್ತಿಯ ಹಂಗರಕಿ ಗ್ರಾಮದಲ್ಲಿ ಘಟನೆ ನಡೆದಿದ್ದು, ನಿನ್ನೆ ತಡರಾತ್ರಿ ಬಿಜೆಪಿ ಕಾರ್ಯಕರ್ತರು ಪಟಾಕ್ಷಿ  ಹಚ್ಚಿದರು ಎಂಬ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ.
ಇನ್ನು ಘಟನೆಯ ಕುರಿತಂತೆ ಇದು ವರೆಗೂ ಯಾವುದೇ ದೂರು ದಾಖಲಾಗಿಲ್ಲವಾದರೂ ಗರಗ ಪೊಲೀಸ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗುವ ಬೆಳವಣಿಗೆ ನಡೆಯುತ್ತಿದ್ದು, ಆರೋಪಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Leave a Comment