ಬಿಜೆಪಿ ನಾಯಕರಿಗೂ ತಳಮಳ

ಬೆಂಗಳೂರು, ಜು.12: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವ ನಿರ್ಧಾರವನ್ನು ಪ್ರಕಟಿಸಿದ ಬೆನ್ನಲ್ಲೇ ವಿಪಕ್ಷ ಬಿಜೆಪಿಯಲ್ಲಿ ತಳಮಳ ಶುರುವಾಗಿದೆ. ವಿಧಾನಸಭೆಯ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ತರಾತುರಿಯಲ್ಲಿ ಸಂತಾಪ ಭಾಷಣ ಮುಗಿಸಿ ವಿಪಕ್ಷ ನಾಯಕರ ಕೊಠಡಿಗೆ ತೆರಳಿದ್ದಾರೆ. ಯಡಿಯೂರಪ್ಪ ಅವರು ಕಚೇರಿಯಲ್ಲಿ ಬಿಜೆಪಿ ಶಾಸಕರೊಂದಿಗೆ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದರು. ಬಿಜೆಪಿಯ ಎಲ್ಲ ಶಾಸಕರು ಬೆಂಗಳೂರಿನಲ್ಲಿರುವಂತೆ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

Leave a Comment