ಬಿಜೆಪಿ ಭಿನ್ನಮತ ಪ್ರತಿಕ್ರಿಯೆಗೆ ಶಾಸಕ ಆನಂದ್ ಸಿಂಗ್ ನಿರಾಕರಣೆ

ಹೊಸಪೇಟೆ.ಜ.8 ಸ್ಥಳೀಯ ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬಿಜೆಪಿ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಶಾಸಕ ಆನಂದ್ ಸಿಂಗ್ ನಿರಾಕರಿಸಿದ್ದಾರೆ.

ಈ ಕುರಿತು ಸಂಜೆವಾಣಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿರುವ ಅವರು, ವಿಜಯನಗರ ಕ್ಷೇತ್ರದಲ್ಲಿ ಬಿಜೆಪಿ ವಲಯದಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಅಲ್ಲದೆ ಈ ಕುರಿತು ಶೀಘ್ರದಲ್ಲಿಯೇ ಪತ್ರಿಕಾಗೋಷ್ಠಿ ಕರೆದು ಎಲ್ಲಾ ವಿಷಯವನ್ನು ಹೇಳುತ್ತೇನೆ ಎಂದಿದ್ದಾರೆ.

ಅಲ್ಲದೆ ಇದೇ ಸಂದರ್ಭದಲ್ಲಿ ಅವರು ನಗರದಲ್ಲಿ ತಮ್ಮ ಸ್ವಂತ ಅನುದಾನದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ತರಕಾರಿ ಮಾರುಕಟ್ಟೆಯನ್ನು ಸಂಕ್ರಾಂತಿ ಹಬ್ಬದ ನಂತರ ಉದ್ಘಾಟನೆ ಮಾಡಲಾಗುವುದು ಎಂದರು.

ನಗರದಲ್ಲಿ ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಜರುಗಿದ ಬಿಜೆಪಿ ಪರವರ್ತನಾ ಯಾತ್ರೆಯಲ್ಲಿ ಭಾಗವಹಿಸದೆ ಸಮಾವೇಶದಿಂದ ಶಾಸಕ ಆನಂದ್ ಸಿಂಗ್ ಹಾಗೂ ಅವರ ಆಪ್ತ ವಲಯವು ದೂರ ಉಳಿದಿತ್ತು. ಇದು ಹಲವಾರು ಊಹಪೋಹಗಳಿಗೆ ಕಾರಣವಾಗಿತ್ತು. ಕಳೆದ ಕಳೆದ ಕೆಲ ದಿನಗಳಿಂದ ಶಾಸಕರು ಸೇರಿದಂತೆ ಅವರ ಆಪ್ತರ ಮೊಬೈಲ್ ಗಳು ಸ್ವಿಚ್ ಆಫ್ ಆಗಿದ್ದವು.

Leave a Comment