ಬಿಜೆಪಿ ಹಿರಿಯ ಮುಖಂಡ ರಾಜನಾಥ್ ಸಿಂಗ್ ಸೂರ್ಯ ನಿಧನ

ಲಕ್ನೋ, ಜೂ 13 – ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ರಾಜ್ಯಸಭಾ ಸದಸ್ಯ ರಾಜನಾಥ್ ಸಿಂಗ್ ಸೂರ್ಯ ದೀರ್ಘಕಾಲದ ಅಸೌಖ್ಯದಿಂದ ಗುರುವಾರ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಿಧನರಾಗಿದ್ದಾರೆ, ಅವರಿಗೆ 80 ವರ್ಷ ವಯಸ್ಸಾಗಿತ್ತು.

ಬಿಜೆಪಿ ನಾಯಕ ಸೂರ್ಯ ಅವರು ಇಂದು ಬೆಳಗ್ಗೆ 5.30ರ ಸುಮಾರಿಗೆ ಅವರ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಸ್ತುತ ವಿದ್ಯಮಾನಗಳು ಮತ್ತು ಇತರ ವಿಷಯಗಳ ಬಗ್ಗೆ ಸೂರ್ಯ ಅವರ ಅಂಕಣಗಳು, ಲೇಖನಗಳು ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿದ್ದವು. ಕೆಲವು ಪತ್ರಿಕೆಗಳಲ್ಲಿ ಅವರು ಸಂಪಾದಕೀಯವನ್ನೂ ಬರೆಯುತ್ತಿದ್ದರು.

1996ರಿಂದ 2002ರವರೆಗೆ ಅವರು ಉತ್ತರ ಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿದ್ದರು.

ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಅವರ ದೇಹವನ್ನು ದಾನ ಮಾಡಲಾಗಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪಕ್ಷದ ಹಿರಿಯ ಸದಸ್ಯರು ಸೂರ್ಯ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು.

ನಾಯಕನ ನಿಧನಕ್ಕೆ ಮುಖ್ಯಮಂತ್ರಿ ಆದಿತ್ಯನಾಥ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

ರಾಜನಾಥ್‍ ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಖ್ಯಾತಿ ಗಳಿಸಿದ್ದರು. ಅವರ ನಿಧನ ದೇಶ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟ ಎಂದು ಮುಖ್ಯಮಂತ್ರಿ ಸಂತಾಪ ಸೂಚಿಸಿದ್ದಾರೆ.

Leave a Comment