ಬಿರು ಬಿಸಿಲಿನ ದಾಹ ತಣ್ಣಿಸುವ ಮಜ್ಜಿಗೆ

ಬೇಸಿಗೆಯ ಬಿಸಿಲಿಗೆ ದೇಹವನ್ನು ತಂಪಾಗಿಟ್ಟುಕೊಳ್ಳಲು ಹಾಗೂ ಆರೋಗ್ಯ ಕಾಪಾಡಿಕೊಳ್ಳಲುತಣ್ಣನೆಯ ಮಜ್ಜಿಗೆ ಕುಡಿಯುವುದೇ ಉತ್ತಮ.

ಹೌದು ಆಯುರ್ವೇದದಲ್ಲಿ ಸಾತ್ವಿಕ ಆಹಾರ ಎಂದು ಪರಿಗಣಿಸಲ್ಪಟ್ಟ ಮಜ್ಜಿಗೆ ಬೇಸಿಗೆಯ ದಣಿವನ್ನು ಆರಿಸಲು ಉತ್ತಮವಾಗಿದೆ. ಮೊಸರಿಗೆ ಕೊಂಚ ನೀರು ಸೇರಿಸಿ ತೆಳ್ಳಗಾಗಿಸಿ, ಇದಕ್ಕೆ ಹಸಿಮೆಣಸು, ಉಪ್ಪು, ಜೀರಿಗೆ ಪುಡಿ, ಚಾಟ್ ಮಸಾಲಾ, ಕೊತ್ತಂಬರಿ ಸೊಪ್ಪು, ಶುಂಠಿ, ಬೇವಿನ ಸೊಪ್ಪು, ಬೆಳ್ಳುಳ್ಳಿ ಮೊದಲಾದವುಗಳನ್ನು ಕೊಂಚ ಕೊಂಚವಾಗಿ ಸೇರಿಸಿ ಮಿಕ್ಸಿಯಲ್ಲಿ ಗೊಟಾಯಿಸಿ ಕುಡಿದರೆ ಬೇಸಿಗೆಗೆ ಇದಕ್ಕಿಂತ ಉತ್ತಮವಾದ ಪೇಯ ಇನ್ನೊಂದಿಲ್ಲ…

ಮಜ್ಜಿಗೆಯಲ್ಲಿ  ಪ್ರೋಬಯೋಟಿಕ್ಸ್ ಅಥವಾ ಜೀರ್ಣಕ್ರಿಯೆಗೆ ಸಹಕರಿಸುವ ಪೋಷಕಾಂಶಗಳು ಜೀರ್ಣಾಂಗಗಳ ಹೊರೆಯನ್ನು ಕಡಿಮೆ ಮಾಡುತ್ತವೆ. ಅಲ್ಲದೇ ಮಜ್ಜಿಗೆಯಲ್ಲಿ ಸೇರಿಸಿರುವ ಜೀರಿಗೆ ಪುಡಿ ಮೊದಲಾದ ಮಸಾಲೆ ಪದಾರ್ಥಗಳು ಜೀರ್ಣಕ್ರಿಯೆಗೆ ಇನ್ನಷ್ಟು ಸಹಕರಿಸಿ ಜೀರ್ಣಕ್ರಿಯೆಯನ್ನು ಸುಲಭ ಮತ್ತು ಪರಿಪೂರ್ಣಗೊಳಿಸುತ್ತವೆ.

ಹೆಚ್ಚಿನ ಪ್ರಮಾಣದ ಮಸಾಲೆ ಹೊಟ್ಟೆ ಸೇರಿ ಹೊಟ್ಟೆ ಉಬ್ಬರಿಕೆ ಉಂಟಾಗುತ್ತದೆ. ಇವು ಹೊಟ್ಟೆಯಲ್ಲಿ ಉರಿ, ಆಮ್ಲೀಯತೆ ಮೊದಲಾದ ತೊಂದರೆಗಳನ್ನು ಉಂಟುಮಾಡಬಹುದು. ಆದರೆ ಹಾಲಿನಲ್ಲಿರುವ ಪ್ರೋಟೀನುಗಳು ಮಜ್ಜಿಗೆಯಲ್ಲಿಯೂ ಇದ್ದು ಈ ಉರಿ ತರಿಸುವ ಮಸಾಲೆಗಳನ್ನು ತಟಸ್ಥವಾಗಿಸುತ್ತವೆ. ಆದ್ದರಿಂದ ಊಟದ ಕಡೆಯ ಆಹಾರವಾಗಿ ಮಜ್ಜಿಗೆಯನ್ನು ಸೇವಿಸುವ ಮೂಲಕ ಮಸಾಲೆಗಳ ಕಾರಣ ಎದುರಾಗಬಹುದಾಗಿದ್ದ ಉರಿ, ಆಮ್ಲೀಯತೆ, ಹೊಟ್ಟೆ ಉಬ್ಬರಿಕೆ ಮೊದಲಾದವು ಇಲ್ಲವಾಗುತ್ತವೆ. ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಮಜ್ಜಿಗೆಯಲ್ಲಿ ಕ್ಯಾಲ್ಸಿಯಂ ಹೊರತಾಗಿ ವಿವಿಧ ಪ್ರೋಟೀನುಗಳು, ವಿಟಮಿನ್ ಬಿ, ಪೊಟ್ಯಾಶಿಯಂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇವೆಲ್ಲವೂ ಆರೋಗ್ಯಕ್ಕೆ ಪೂರಕವಾಗಿವೆ.

ಅಲ್ಲದೇ ಸಾಕಷ್ಟು ಪ್ರಮಾಣದಲ್ಲಿ ಲ್ಯಾಕ್ಟಿಕ್ ಆಮ್ಲವಿದ್ದು ಜಠರದಲ್ಲಿರುವ ಪಾಥೋಜೆನ್ ಮತ್ತು ಕೆಟ್ಟ ಬ್ಯಾಕ್ಟೀರಿಯಾಗಳ ನಿವಾರಣೆಗೆ ಸಹಕರಿಸುತ್ತದೆ. ಪರಿಣಾಮವಾಗಿ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.  ನಿತ್ಯವೂ ಮಜ್ಜಿಗೆಯನ್ನು ಸೇವಿಸುವ ಮೂಲಕ ದೇಹಕ್ಕೆ ಹಲವು ರೀತಿಯ ಲಾಭಗಳಿವೆ. ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುವುದು, ರಕ್ತದೊತ್ತಡ ಸಮರ್ಪಕವಾಗಿರುವಂತೆ ನೋಡಿಕೊಳ್ಳುತ್ತದೆ.

ಸಿಗೆಯ ಬಿಸಿಯಲ್ಲಿ ದೇಹವೂ ಬಿಸಿಯಾಗತೊಡಗುತ್ತದೆ. ಇದನ್ನು ತಣಿಸಲು ಅತಿ ಹೆಚ್ಚಿನ ಪ್ರಮಾಣದಲ್ಲಿ ಬೆವರು ಹರಿಯಬೇಕಾಗುತ್ತದೆ. ಆಗ ದೇಹದಿಂದ ನಷ್ಟವಾಗುವ ನೀರನ್ನು ಬೇಗನೇ ಭರ್ತಿಮಾಡಿಕೊಳ್ಳದೇ ಇದ್ದರೆ ದ್ರವದ ಪ್ರಮಾಣ ಕಡಿಮೆಯಾಗಿ ದೇಹ ಹೆಚ್ಚು ಬಿಸಿಯಾಗಲು ಕಾರಣವಾಗುತ್ತದೆ. ಮಜ್ಜಿಗೆಯ ಸೇವನೆ ಈ ತೊಂದರೆಯಿಂದ ತಡೆಯುತ್ತದೆ ಹಾಗೂ ದೇಹವನ್ನು ತಂಪಾಗಿಡಲು ನೆರವಾಗುತ್ತದೆ. ಅಲ್ಲದೇ  ಮಹಿಳೆಯರಿಗೆ ಈ ದಿನಗಳ ಮುನ್ನ ಮತ್ತು ಹಿಂದಿನ ದಿನಗಳಲ್ಲಿ ಎದುರಾಗುವ ಸ್ರಾವದಿಂದಲೂ ಮಜ್ಜಿಗೆ ಉಪಶಮನ ನೀಡುತ್ತದೆ.

Leave a Comment