ಬಿಸಿಯೂಟದಲ್ಲಿ ಹಲ್ಲಿ: 17 ವಿದ್ಯಾರ್ಥಿಗಳು ಅಸ್ವಸ್ಥ

ಚೇಳೂರು, ಅ. ೨- ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿದ 17 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಘಟನೆ ಗುಬ್ಬಿ ತಾಲ್ಲೂಕಿನ ಹೊಸಕೆರೆ ಗ್ರಾಮದಲ್ಲಿ ನಡೆದಿದೆ.
ಹೊಸಕೆರೆ ಗ್ರಾಮದ ಶ್ರೀ ಬಸವೇಶ್ವರ ಪ್ರೌಢಶಾಲೆಯಲ್ಲಿ ನಿನ್ನೆ ಮಧ್ಯಾಹ್ನ ಶಾಲೆಯ 90 ವಿದ್ಯಾರ್ಥಿಗಳಿಗೆ ಬಿಸಿಯೂಟ ಬಡಿಸಲಾಯಿತು. ಈ ವಿದ್ಯಾರ್ಥಿಗಳ ಪೈಕಿ ವಿದ್ಯಾರ್ಥಿನಿಯೊಬ್ಬರ ಊಟದ ತಟ್ಟೆಯಲ್ಲಿ ಹಲ್ಲಿ ಪತ್ತೆಯಾಗಿದೆ. ಅಷ್ಟರಲ್ಲಾಗಲೇ ಕೆಲ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದರೆನ್ನಲಾಗಿದೆ.
ವಿದ್ಯಾರ್ಥಿನಿ ತಟ್ಟೆಯಲ್ಲಿ ಹಲ್ಲಿ ಪತ್ತೆಯಾಗಿದ್ದನ್ನು ನೋಡಿದ ಶಿಕ್ಷಕರು ತಕ್ಷಣ ಊಟ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಊಟ ಸೇವಿಸದಂತೆ ತಡೆದಿದ್ದಾರೆ.
ಸಂಜೆ ಶಾಲೆ ಮುಗಿಸಿಕೊಂಡು ವಿದ್ಯಾರ್ಥಿಗಳು ಮನೆಗೆ ಹೋದ ನಂತರ 17 ವಿದ್ಯಾರ್ಥಿಗಳಲ್ಲಿ ವಾಂತಿ, ತಲೆನೋವು ಮತ್ತು ಹೊಟ್ಟೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ.
ಕೂಡಲೇ ಪೋಷಕರು ಅಸ್ವಸ್ಥಗೊಂಡ ಮಕ್ಕಳನ್ನು ಹೊಸಕೆರೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದಾಗ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಅಸ್ವಸ್ಥ ಮಕ್ಕಳನ್ನು ಎಂ.ಎನ್.ಕೋಟೆ ಮತ್ತು ಚೇಳೂರು ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
@12bc = ಆಕ್ರೋಶ
ಬಸವೇಶ್ವರ ಪ್ರೌಢಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರೂ ಸಹ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸದೆ ಹಾಗೆಯೇ ಮನೆಗೆ ಕಳುಹಿಸಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೋಷಕರು ಅಸ್ವಸ್ಥಗೊಂಡಿದ್ದ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಸಹ ಶಿಕ್ಷಕರು ಮಾತ್ರ ಆಸ್ಪತ್ರೆಗೆ ಬಾರದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದ್ದಾರೆ.
ಘಟನೆಯ ಸುದ್ದಿ ತಿಳಿದ ಚೇಳೂರು ಪಿಎಸ್ಐ ಶೋಭ ಅವರು ಆಸ್ಪತ್ರೆಗಳಿಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.

Leave a Comment