ಬಿಸಿಯೂಟ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ

ಟಿ.ನರಸೀಪುರ.ಜ.12- ಸರ್ಕಾರದ ಮಹತ್ತರ ಯೋಜನೆಗಳಲ್ಲೊಂದಾದ ಬಿಸಿಯೂಟ ಯೋಜನೆಯಲ್ಲಿಯೂ ಪ್ಲ್ಯಾಸ್ಟಿಕ್ ಅಕ್ಕಿಯನ್ನು ಕಲಬೆರಕೆ ಮಾಡಿರುವ ಪ್ರಕರಣ ನಿನ್ನೆ ಬೆಳಕಿಗೆ ಬಂದಿದೆ.
ತಾಲೂಕಿನ ಬನ್ನಹಳ್ಳಿಹುಂಡಿ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬಿಸಿಯೂಟ ಯೋಜನೆಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯವರು ಸರಬರಾಜು ಮಾಡಿರುವ ಅಕ್ಕಿಯಲ್ಲಿ ಪ್ಲ್ಯಾಸ್ಟಿಕ್ ಅಕ್ಕಿ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಶಾಲೆಯ ಅಡುಗೆ ಸಹಾಯಕರು ಮಕ್ಕಳಿಗೆ ಮಧ್ಯಾಹ್ನದ ಊಟ ಸಿದ್ಧಪಡಿಸಲು ಅಕ್ಕಿಯನ್ನು ತೆಗೆದುಕೊಂಡ ಸಂಧರ್ಭದಲ್ಲಿ ಅಕ್ಕಿಯಲ್ಲಿ ಪ್ಲ್ಯಾಸ್ಟಿಕ್ ಅಕ್ಕಿ ಇರುವುದು ಕಂಡು ಬಂದಿದೆ. ಇದರಿಂದ ಗಾಬರಿಗೊಂಡ ಅಡುಗೆ ಶಿಕ್ಷಕರು ಮಧ್ಯಾಹ್ನ ಬಿಸಿಯೂಟ ತಯಾರಿಸದೆ ಇದ್ದುದ್ದರಿಂದ ಭಾರೀ ಅನಾಹುತ ತಪ್ಪಿದೆ. ಅಕ್ಕಿಯಲ್ಲಿ ಪ್ಲ್ಯಾಸ್ಟಿಕ್ ಅಕ್ಕಿ ಬೆರಕೆಗೊಂಡಿದೆ ಎಂಬ ವಿಷಯ ತಿಳಿದ ವಿದ್ಯಾರ್ಥಿಗಳ ಪೋಷಕರು ಆತಂಕಗೊಂಡರಲ್ಲದೆ, ತಮ್ಮ ಮಕ್ಕಳ ಜೀವದೊಂದಿಗೆ ಚೆಲ್ಲಾಟ ಆಡುತ್ತಿರುವ ಆಹಾರ ಇಲಾಖೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Comment