ಬೀದರ್‌ನಲ್ಲಿ 11‌ಮಂದಿಗೆ ಕೊರೊನಾ ಸೋಂಕಿರುವುದು ದೃಢ : ಶ್ರೀರಾಮುಲು

ಬೆಂಗಳೂರು, ಏ.2 – ಬೀದರ್ ಜಿಲ್ಲೆಯ 11 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ 27 ಮಂದಿ ತಬ್ಲಿಗಿ ಜಮಾತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಅವರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಸ್ಯಾಂಪಲ್ಸ್ ಕಳಿಸಿಕೊಡಲಾಗಿದೆ. 27 ಜನರಲ್ಲಿ 11 ಮಂದಿಗೆ ಕೊರೊನಾ ಸೋಂಕು ಪಾಸಿಟಿವ್ ಇರುವುದು ಧೃಡಪಟ್ಟಿದೆ ಎಂದರು.
ಇನ್ನು ರಾಜ್ಯದ 362 ಮಂದಿ ಸಭೆಯಲ್ಲಿ ಭಾಗಿಯಾಗಿದ್ದು, ರಾಜ್ಯದಲ್ಲಿ ಒಟ್ಟು 121 ಪಾಸಿಟಿವ್ ಕೇಸ್ ದಾಖಲಾಗಿವೆ. ವಿಶೇಷವಾಗಿ ಬೀದರ್ ಪ್ರಕರಣದ ಮೇಲೆ ಅತಿ ಹೆಚ್ಚು ಗಮನ ವಹಿಸಲಾಗುತ್ತಿದೆ. ಈಗಾಗಲೇ ಅಲ್ಲಿ ಸಾಕಷ್ಟು ಮುಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ ಎಂದರು.
ಇನ್ನು, ಇಲ್ಲಿಂದ ತೆರಳಿದ್ದ 362 ಮಂದಿಯ ಕಾಲ್ ಟ್ರೇಸ್ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

Leave a Comment