ಬುರ್ಕಾ ಕಡ್ಡಾಯ ಆದೇಶ ಹಿಂಪಡೆದ ಕೆಎಂಇಎಸ್

ತಿರುವನಂತಪುರಂ, ಮೇ ೧೬- ಕೇರಳದ ಮುಸ್ಲಿಂ ಎಜುಕೇಷನಲ್ ಸೊಸೈಟಿ ತನ್ನ ಸಮುದಾಯದ ವಿದ್ಯಾರ್ಥಿಗಳಿಗೆ ಮುಖಗವಸು (ಬುರ್ಕಾ) ಹಾಕಿಕೊಳ್ಳುವಂತೆ ನೀಡಿದ್ದ ಆದೇಶವನ್ನು ಹಿಂಪಡೆದಿದೆ.

ಕಾಂಗ್ರೆಸ್ ನೇತೃತ್ವದ ಸಂಯುಕ್ತ ಪ್ರಜಾಸತ್ತಾತ್ಮಕ ರಂಗ ಶಾಲಾ – ಕಾಲೇಜುಗಳಲ್ಲಿ ಮುಸ್ಲಿಂ ಯುವತಿಯರಿಗೆ ಮುಖಗವಸು ಹಾಕುವುದನ್ನು ಕಡ್ಡಾಯಗೊಳಿಸಿದ ಮುಸ್ಲಿಂ ಶಿಕ್ಷಣ ಸೊಸೈಟಿಯ ಆದೇಶವನ್ನು ಹಿಂಪಡೆಯುವಂತೆ ಮನವಿ ಮಾಡಿತು.

ಮನವಿಗೆ ಪೂರಕವಾಗಿ ಸ್ಪಂದಿಸಿದ ಮುಸ್ಲಿಂ ಎಜುಕೇಷನಲ್ ಸೊಸೈಟಿ, ಇಜಾಬ್ ನಿಷೇಧವನ್ನು ಹಿಂಪಡೆದಿದೆ.

ಈ ಸಂಬಂಧ ಹೇಳಿಕೆ ನೀಡಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಅಧ್ಯಕ್ಷ ಪನಕ್ಕಾಡು ಹೈದರಾಲಿ, ವಿದ್ಯಾರ್ಥಿಗಳು ಮುಖಗವಸು ಹಾಕಿಕೊಳ್ಳುವುದು ಅಥವಾ ಬಿಡುವುದು ಆಯಾ ವಿದ್ಯಾರ್ಥಿಗಳಿಗೆ ಬಿಟ್ಟದ್ದು. ಧರ್ಮದ ಅನುಸಾರ ಮುಖಗವಸು ಹಾಕಿಕೊಳ್ಳಲು ತಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಆದೇಶವನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ.

ಎರಡು ವಾರಗಳ ಹಿಂದೆ ಮುಸ್ಲಿಂ ಎಜುಕೇಷನಲ್ ಸೊಸೈಟಿ ತನ್ನ ಎಲ್ಲಾ ಶಿಕ್ಷಣ ಸಂಸ್ಥೆಗಳ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಮುಖಗವಸನ್ನು ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಸೂಚಿಸಿತ್ತು. ಇದಕ್ಕೆ ಕೇರಳದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಮುಸ್ಲಿಂ ಶಿಕ್ಷಣ ಸೊಸೈಟಿಯ 150 ವಿದ್ಯಾಸಂಸ್ಥೆಗಳಲ್ಲಿ 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿದ್ದು, ಈ ಪೈಕಿ 40 ಸಾವಿರ ಮುಸ್ಲಿಂ ವಿದ್ಯಾರ್ಥಿನಿಯರಿದ್ದಾರೆ.

Leave a Comment