ಬುಲೆಟ್ ಪ್ರಕಾಶ್ ಸ್ಥಿತಿ ಗಂಭೀರ

ಬೆಂಗಳೂರು, ಏ. ೬- ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಹಿರಿಯ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಿಡ್ನಿ, ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ಬುಲೆಟ್ ಪ್ರಕಾಶ್ ಅವರಿಗೆ ಕಿಡ್ನಿ ವೈಫಲ್ಯದ ಜೊತೆಗೆ ಕಾಲಿಗೆ ಗ್ಯಾಂಗ್ರಿನ್ ಆಗಿದ್ದು ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಡಲು ಕಾರಣವಾಗಿದೆ.
ಕಳೆದೊಂದು ತಿಂಗಳಿನಿಂದ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಇದುವರೆಗೂ 3, 4 ಆಸ್ಪತ್ರೆಗಳನ್ನು ಬದಲಾಯಿಸಿದ್ದಾರೆ. ಆದರೂ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ.
ಕೃತಕ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿದ್ದು, ಆರೋಗ್ಯ ಸ್ಥಿತಿ ಬಿಗಾಡಿಯಿಸಿದೆ.
ಕಳೆದ 2 ವರ್ಷಗಳ ಹಿಂದೆ ದೇಹ ತೂಕ ಇಳಿಸಿಕೊಳ್ಳಲು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆ ಬಳಿಕ ಅವರ ಆರೋಗ್ಯ ಸಮಸ್ಯೆ ಎದುರಾಗಿದ್ದು ಶಸ್ತ್ರಚಿಕಿತ್ಸೆ ಅವರ ಜೀವಕ್ಕೆ ಮುಳುವಾಗುವಂತಾಗಿದೆ.
ದೇಹತೂಕ ಇಳಿಸಿಕೊಂಡ ನಂತರ ಸಿನಿಮಾಗಳಲ್ಲಿ ಅವಕಾಶ ಕಡಿಮೆಯಾಗಿ, ಮಾನಸಿಕವಾಗಿ ಕುಗ್ಗಿದ್ದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

Leave a Comment