ಬೆಂಗಳೂರಿಗೆ ಬರಲು ಸಹಕರಿಸಿದ ಸಚಿವರಿಗೆ ನಟಿ‌ ಭಾರತಿ ವಿಷ್ಣುವರ್ಧನ್ ಕೃತಜ್ಞತೆ

 

ಬೆಂಗಳೂರು,ಏ16- ಲಾಕ್ ಡೌನ್ ಆಗುವ ಮೊದಲೇ ಮೈಸೂರಿಗೆ ಆಗಮಿಸಿದ್ದ ಹಿರಿಯ ನಟಿ ಡಾ. ಭಾರತಿ ವಿಷ್ಣುವರ್ಧನ್ ಅವರು ಬೆಂಗಳೂರಿನ‌ನಿವಾಸಕ್ಕೆ ಆಗಮಿಸಿದ್ದಾರೆ.
ಲಾಕ್ ಡೌನ್ ಪರಿಣಾಮವಾಗಿ ಬೆಂಗಳೂರಿಗೆ ತೆರಳಲು ಸಾಧ್ಯವಾಗಿರಲಿಲ್ಲ. ವಾಹನ ಬೆಂಗಳೂರಲ್ಲೇ ಬಿಟ್ಟು ಬಂದಿದ್ದರಿಂದ ವಾಪಸ್ ಬರಲು ಸಾಧ್ಯವಾಗಿರಲಿಲ್ಲ. ಅಗತ್ಯ ಔಷಧಿಗಳು ಖಾಲಿಯಾಗುತ್ತಾ ಬಂದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಗಮನಕ್ಕೆ ತಂದರು.
ಮಾನವೀಯತೆಯ ದೃಷ್ಟಿಯಿಂದ ತಕ್ಷಣವೇ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಮಾತನಾಡಿದ ಸಚಿವರು ಅಗತ್ಯ ಪಾಸ್, ವಾಹನ ವ್ಯವಸ್ಥೆ ಮಾಡಿಸಿ, ಡಾ. ಭಾರತಿ ವಿಷ್ಣುವರ್ಧನ್ ಬೆಂಗಳೂರಿಗೆ ಬರಲು ನೆರವಾಗಿದ್ದಾರೆ.
ಡಾ. ಭಾರತಿ ವಿಷ್ಣುವರ್ಧನ್ ಅವರು ಮೈಸೂರಿನ ವಿಜಯನಗರ 2 ನೇ ಹಂತದಲ್ಲಿ ಇದ್ದರು. ಈಗ ಬೆಂಗಳೂರು ತಲುಪಿದ್ದು, ಸಹಕಾರ ನೀಡಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ‌ಸಚಿವರಿಗೆ ದೂರವಾಣಿ ಮೂಲಕ ಮಾತನಾಡಿ ಧನ್ಯವಾದ ಸಲ್ಲಿಸಿದ್ದಾರೆ.

Leave a Comment