ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ‘ಬೆಲ್ ಬಾಟಮ್’ 2ನೇ ಅತ್ಯುತ್ತಮ ಜನಪ್ರಿಯ ಚಿತ್ರ

ಬೆಂಗಳೂರು, ಮಾ 5- ಹನ್ನೆರಡನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ಅಭಿನಯದ ‘ಬೆಲ್ ಬಾಟಮ್’ ಎರಡನೇ ಅತ್ಯುತ್ತಮ ಜನಪ್ರಿಯ ಚಿತ್ರವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕಿಕ್ ನೀಡುವ ಪಂಚಿಂಗ್ ಡೈಲಾಗ್‌ಗಳ ಮೂಲಕ ರಾಬರಿ ಪತ್ತೇದಾರಿಕೆಯ ಪ್ರಸಂಗ ಹೊಂದಿರುವ ಚಿತ್ರವನ್ನು ಕನ್ನಡ ಚಿತ್ರ ರಸಿಕರ ಮೆಚ್ಚುಗೆ ಪಡೆಯುವಲ್ಲಿಯೂ ಯಶಸ್ವಿಯಾಗಿತ್ತು.

ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಪಡೆದಿರುವ ಕುರಿತು ರಿಷಬ್ ಶೆಟ್ಟಿ ಟ್ವಿಟರ್ ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.

“ಗೆಳೆಯರೇ, ನಿಮ್ಮೆಲ್ಲರ ಹಾರೈಕೆಗಳಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಬೆಲ್ ಬಾಟಮ್. ಚಿತ್ರವು ವರ್ಷದ 2ನೇ ಅತ್ಯುತ್ತಮ ಜನಪ್ರಿಯ ಚಿತ್ರ ಪ್ರಶಸ್ತಿ ಪಡೆದುಕೊಂಡಿದೆ. ನಮ್ಮ ಚಿತ್ರತಂಡಕ್ಕೆ ರಾಜ್ಯಪಾಲರು ಪ್ರಶಸ್ತಿ ವಿತರಿಸಿದರು “ ಎಂದು ರಿಷಬ್ ಶೆಟ್ಟಿ ಬರೆದುಕೊಂಡಿದ್ದಾರೆ.

Leave a Comment