ಬೆಳ್ತಂಗಡಿ ನಿವಾಸಿ ಕೊರೊನಾಕ್ಕೆ ಬಲಿ! 

ದ.ಕ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 6ಕ್ಕೇರಿಕೆ!!
ಮಂಗಳೂರು, ಮೇ 25- ಬೆಳ್ತಂಗಡಿ ನಿವಾಸಿ 48ರ ಹರೆಯದ ವ್ಯಕ್ತಿಯೊಬ್ಬರು ಹೃದಯ ಸಂಬಂಧಿ ಖಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು ಸಾವಿನ ಬಳಿಕ ಅವರಲ್ಲಿ ಕೊರೋನಾ ಪಾಸಿಟಿವ್ ಬಂದಿದೆ. ಇದರಿಂದ ಅವರ ವಾಸಸ್ಥಳ ಸೇರಿದಂತೆ ಅವರು ಎಲ್ಲೆಲ್ಲಿ ಹೋಗಿದ್ದಾರೆ ಎಂಬ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ.
ಪ್ರಾರಂಭದಲ್ಲಿ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡಿತ್ತು. ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅವರಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರು ವ್ಯಕ್ತಿಯ ಗಂಟಲು ದ್ರವದ ಮಾದರಿಯನ್ನು ತಪಾಸಣೆಗೆ ಕಳುಹಿಸಿದ್ದರು. ವರದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ವ್ಯಕ್ತಿ ವಾಸಿಸುತ್ತಿದ್ದ ಗ್ರಾಮ, ಓಡಾಡಿದ್ದ ಸ್ಥಳ ಸೀಲ್ ಡೌನ್ ಆಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಮೂಲಕ ಮಹಾಮಾರಿ ಕೊರೋನಾ 6 ಮಂದಿಯನ್ನು ಬಲಿ ಪಡೆದಿದೆ. ಬಂಟ್ವಾಳ ತಾಲೂಕು ಒಂದರಲ್ಲೇ ಮೂವರು ಸಾವನ್ನಪ್ಪಿದ್ದು ಬೋಳೂರು, ಶಕ್ತಿನಗರದಲ್ಲೂ ಸಾವು ಸಂಭವಿಸಿತ್ತು. ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಈ ಮಧ್ಯೆ ಸಾವಿಗೀಡಾಗುವವರ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.
Share

Leave a Comment