ಬೆಳ್ಳಿಬೆಡಗು ಕಾರ್ಯಕ್ರಮಕ್ಕೆ ಮೋದಿಗೆ ಆಹ್ವಾನ ನೀಡಿದ ವಚನಾನಂದ ಶ್ರೀ

ದಾವಣಗೆರೆ.ಡಿ.11- ಜಿಲ್ಲೆಯ ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮದಲ್ಲಿರುವ ವೀರ ಶೈವ ಲಿಂಗಾಯಿತ ಪಂಚಮಸಾಲಿ ಪೀಠದಲ್ಲಿ ಜ 13 ಮತ್ತು 14 ರಂದು ನಡೆಯುವ ಬೆಳ್ಳಿ ಬೆಡಗು ಕಾರ್ಯಕ್ರಮಕ್ಕೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರನ್ನು ಪೀಠಾಧ್ಯಕ್ಷರಾದ ಶ್ರೀ ವಚನಾನಂದ ಮಹಾಸ್ವಾಮಿಗಳು ಆಹ್ವಾನಿಸಿದ್ದಾರೆ.
2020 ರ ಜನವರಿ 13 ಮತ್ತು 14ರ ಮಕರ ಸಂಕ್ರಾತಿ ಹಬ್ಬದ ದಿನದಂದು ವೀರಶೈವ ಲಿಂಗಾಯಿತ ಪಂಚಮಸಾಲಿ ಮಠದ ಆವರಣದಲ್ಲಿ ಪೀಠಾಧ್ಯಕ್ಷರಾದ ಶ್ರೀ ವಚನಾನಂದ ಮಹಾಸ್ವಾಮಿಗಳು ಹಾಗೂ ಸಮಾಜದ ಮುಖಂಡರ ನೇತೃತ್ವದಲ್ಲಿ ಅದ್ದೂರಿ ಹರಜಾತ್ರೆ ಹಾಗೂ ಬೆಳ್ಳಿಬೆಡಗು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ನೆರವೇರಿಸಬೇಕು ಎಂದು ಶ್ರೀ ವಚನಾನಂದ ಮಹಾಸ್ವಾಮಿಗಳು ದೆಹಲಿಗೆ ತೆರಳಿ ಆಮಂತ್ರಣ ನೀಡಿದ್ದಾರೆ. ಈ ಸಂಧಂರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಮುರುಗೇಶ ನಿರಾಣಿ, ಶ್ರೀ ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ಹಾಗೂ ಬಿ. ನಾಗನಗೌಡರು ಉಪಸ್ಥಿತರಿದ್ದರು.

Leave a Comment