ಬೈಕ್‌ಗಳ ಡಿಕ್ಕಿ: ಯುವಕ ಸಾವು

ಹುಳಿಯೂರು, ಆ. ೨೧- ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊ‌ಡೆದ ಪರಿಣಾಮ ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

ಮೃತಪಟ್ಟವರನ್ನು ಪಟ್ಟಣದ ಲಿಂಗಪ್ಪನಪಾಳ್ಯದ ಲೇಟ್ ಡಿ. ಬೀರಪ್ಪ ಎಂಬುವರ ಮಗ ಮನೋಜ್ (16) ಎಂದು ಗುರುತಿಸಲಾಗಿದೆ. ಈತ ತೋಟಕ್ಕೆ ಹೋಗಿ ವಾಪಸ್ ಲಿಂಗಪ್ಪನಪಾಳ್ಯಕ್ಕೆ ಬರುತ್ತಿದ್ದಾಗ ಕೆ.ಸಿ.ಪಾಳ್ಯದ ಆಂಜನೇಯಸ್ವಾಮಿ ದೇವಾಲಯದ ರಸ್ತೆಯ ತಿರುವಿನಲ್ಲಿ ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ತೀವ್ರ ಗಾಯಗೊಂಡಿದ್ದ ಈತನನ್ನು ಚಿಕ್ಕನಾಯಕನಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

ಈ ಸಂಬಂಧ ಹುಳಿಯಾರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Comment