ಬೈಕ್‌ನಿಂದ ಬಿದ್ದು ಯುವಕ ಸಾವು

ತುಮಕೂರು, ಅ. ೧೨- ಯುವಕನೋರ್ವ ದ್ವಿಚಕ್ರ ವಾಹನದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹೆಬ್ಬೂರು ಸಮೀಪದ ದೊಡ್ಡಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಗ್ರಾಮದ ನಿವಾಸಿ ಭದ್ರೇಗೌಡ (23) ಎಂಬುವರೇ ಮೃತಪಟ್ಟಿರುವ ದುರ್ದೈವಿ ಯುವಕ. ಈತ ರಾತ್ರಿ ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಆಯ ತಪ್ಪಿ ಬೈಕ್‌ನಿಂದ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸಂಬಂಧ ಹೆಬ್ಬೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Comment