ಬೈಕ್‌ನಿಂದ ಬಿದ್ದು ವ್ಯಕ್ತಿ ಸಾವು

ತುಮಕೂರು, ಆ. ೧- ದ್ವಿಚಕ್ರ ವಾಹನಕ್ಕೆ ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಅರಕೆರೆ ಬಳಿ ನಡೆದಿದೆ.

ನಗರದ ಎಸ್.ಎಸ್.ಪುರಂನ 12ನೇ ಕ್ರಾಸ್ ನಿವಾಸಿ ರೇಣುಕಾಪ್ರಸಾದ್ (52) ಎಂಬುವರೇ ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿ. ಇವರು ದ್ವಿಚಕ್ರ ವಾಹನದಲ್ಲಿ ತುಮಕೂರು ಕಡೆಗೆ ಬರುತ್ತಿದ್ದಾಗ ನಾಯಿ ಅಡ್ಡ ಬಂದಿದ್ದರಿಂದ ತಪ್ಪಿಸಿಕೊಳ್ಳಲು ಹೋಗಿ ಆಯತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Comment