ಬೈಕ್‌ ಕಳ್ಳನ ಬಂಧನ: 2.10 ಲಕ್ಷ ಬೆಲೆಯ ಮಾಲು ವಶ

ತುಮಕೂರು, ನ. ೮- ಮನೆಯ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಖದೀಮನೋರ್ವನನ್ನು ಗುಬ್ಬಿ ಪೊಲೀಸರು ಪತ್ತೆಹಚ್ಚಿ ಬಂಧಿಸಿ, ಆತನಿಂದ 2.10 ಲಕ್ಷ ರೂ. ಬೆಲೆ ಬಾಳುವ 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಗುಬ್ಬಿ ತಾಲ್ಲೂಕು ಚೇಳೂರು ಹೋಬಳಿ ಗೌರಿಪುರ ವಾಸಿ ಮಂಜುನಾಥ್ (35) ಎಂಬಾತನೇ ಬಂಧಿತ ಆರೋಪಿ. ಚೇಳೂರು ಹೋಬಳಿ ಮಾದಾಪುರ ಗ್ರಾಮದ ತೋಟದಲ್ಲಿ ವಾಸವಾಗಿದ್ದ ಶಿವಪ್ರಸಾದ್ ಎಂಬುವರ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಇದೇ ನ. 2 ರಂದು ಸದರಿ ಆರೋಪಿ ಕಳವು ಮಾಡಿದ್ದನು.

ಈ ಬಗ್ಗೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ದಿವ್ಯಾಗೋಪಿನಾಥ್, ಅಡಿಷನಲ್ ಎಸ್ಪಿ ‌ಡಾ. ಶೋಭರಾಣಿ ಮಾರ್ಗದರ್ಶನದಲ್ಲಿ ಗ್ರಾಮಾಂತರ ಡಿವೈಎಸ್ಪಿ ವೆಂಕಟಸ್ವಾಮಿ ನೇತೃತ್ವದಲ್ಲಿ ಸಿಪಿಐ ದೀಪಕ್, ಪಿಎಸ್ಐ ಟಿ.ಎಂ. ಗಂಗಾಧರ್ ಮತ್ತು ಸಿಬ್ಬಂದಿಗಳಾದ ನವೀನ್‌ಕುಮಾರ್, ವಿಜಯಕುಮಾರ್ ರವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿ ವಿಚಾರಣೆಗೊಳಪಡಿಸಿದಾಗ ತುಮಕೂರು ತಾಲ್ಲೂಕು ವಡ್ಡರಹಳ್ಳಿಸ ಗೂಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕು ಕೋಡಿಹಳ್ಳಿ ಗ್ರಾಮದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ ಪ್ರಕರಣಗಳು ಬೆಳಕಿಗೆ ಬಂದಿವೆ.

Leave a Comment