ಬೈಕ್ ಅಪಘಾತ: ಇಬ್ಬರಿಗೆ ಗಾಯ

ತುಮಕೂರು, ಜ. ೧- ಹೊಸ ವರ್ಷದ ಆಚರಣೆಯ ಸಂಭ್ರಮವನ್ನು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು ಅಪಘಾತಕ್ಕೀಡಾಗಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಲ್ಲಿನ ಹೊರವಲಯದ ಯಲ್ಲಾಪುರದ ಬಳಿ ಮಧ್ಯರಾತ್ರಿ ನಡೆದಿದೆ.

ಮಧ್ಯರಾತ್ರಿ ಯುವಕರಿಬ್ಬರು ತಮ್ಮ ಸ್ನೇಹಿತರೊಂದಿಗೆ ಹೊಸ ವರ್ಷದ ಆಚರಣೆಯನ್ನು ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿರುವಾಗ ರಸ್ತೆಬದಿ ಕಂಬಕ್ಕೆ ಅಪ್ಪಳಿಸಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Comment