ಬೈಕ್ ಅಪಘಾತ

ಗಾಯಾಳು ಮೃತ್ಯು
ಕೊಣಾಜೆ, ಆ. ೬- ಅಸೈಗೋಳಿ ಬಳಿ ಬೈಕ್ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಹಿಂಬದಿ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಬಂಟ್ವಾಳದ ಮಂಚಿ ಮೋಂತಿಮಾರು ನಿವಾಸಿ ಅಬ್ಬಾಸ್ ಎಂಬವರ ಪುತ್ರ ಮಹಮ್ಮದ್ ಝುಬೈರ್ (೨೪) ಮೃತರು. ತೊಕ್ಕೊಟ್ಟು ಕಡೆಯಿಂದ ಮಂಚಿ ಕಡೆಗೆ ಅಬೂಬಕರ್ ಸಿದ್ದೀಖ್ ಎಂಬವರ ಜೊತೆಗೆ ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಹಿಂಬದಿ ಕುಳಿತಿದ್ದ ಝುಬೈರ್ ಬೈಕ್ ಅಪಘಾತದಿಂದ ರಸ್ತೆಗೆ ಎಸೆಯಲ್ಪಟ್ಟಿದ್ದರು. ತಲೆಯ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮೃತಪಟ್ಟಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment