ಬೈಕ್ ಸ್ಕಿಡ್ಡಾಗಿ ಬಿದ್ದು ಓರ್ವನ ಸಾವು

ಸಂಜೆವಾಣಿ ವಾರ್ತೆ)

ಜೇವರ್ಗಿ,ಸೆ.7-ಬೈಕ್ ಸ್ಕಿಡ್ಡಾಗಿ ಬಿದ್ದು ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಹಿಂಬದಿ ಸವಾರನಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯ ಜೇರಟಗಿ ಕ್ರಾಸ್ ಹತ್ತಿರ ಇಂದು ಬೆಳಿಗ್ಗೆ ನಡೆದಿದೆ.

ಮೃತನನ್ನು ಅಫಜಲಪುರ ಪಟ್ಟಣದ ರಾಜಶೇಖರ ತಂದೆ ಕಾಳಪ್ಪ ಬಡಿಗೇರ (37) ಎಂದು ಗುರುತಿಸಲಾಗಿದ್ದು, ಗಾಯಗೊಂಡ ಸಾಯಬಣ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮದುವೆ ನಿಶ್ಚಿತಾರ್ಥಕ್ಕಾಗಿ ಇವರು ಜೇವರ್ಗಿಯಿಂದ ಇಜೇರಿಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಸುದ್ದಿ ತಿಳಿದು ಜೇವರ್ಗಿ ಸಿಪಿಐ ಡಿ.ವಿ.ಪಾಟೀಲ, ನೆಲೋಗಿ ಪಿಎಸ್ಐ ಸಿದ್ದರಾಮೇಶ್ವರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

Leave a Comment