ಬೈಲುವದ್ದಿಗೇರಿಯಲ್ಲಿ ಬಿಜೆಪಿ ಸಭೆ

ಹೊಸಪೇಟೆ.ಮಾ.12 ತಾಲೂಕಿನ ಬೈಲುವದ್ದಿಗೇರಿಯ ಸುಡುಗಾಡಪ್ಪ ತಾತನವರ ದೇವಸ್ಥಾನದಲ್ಲಿ ಭಾನುವಾರ ಬಿಜೆಪಿ ಕಾರ್ಯಕರ್ತರ ಸಭೆ ಜರುಗಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ, ಬಿಜೆಪಿ ಮಂಡಲ ಅಧ್ಯಕ್ಷ ಅನಂತಪದ್ಮನಾಭ, ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಪಕ್ಷದ ಕಾರ್ಯಕರ್ತರು ಈಗಿನಿಂದಲೇ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಹಾಗೂ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಡಳಿತಾವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತು ಮತದಾರರಿಗೆ ತಿಳಿಸುವ ಕೆಲಸ ಮಾಡುವಂತೆ ಹೇಳಿದರು.

ಮುಖಂಡ ಅನಿಲ್ ಜೋಶಿ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆ ಪಕ್ಷಕ್ಕೆ ಒಂದು ಸವಾಲಾಗಿದ್ದು. ಅದನ್ನು ಎದುರಿಸಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಂದಾಗಿ ಗ್ರಾಮೀಣ ಭಾಗದಲ್ಲಿ ಪಕ್ಷವನ್ನು ಬಲಪಡಿಸಿ ಎಂದರು.

ಸಭೆಯಲ್ಲಿ ಮುಖಂಡರಾದ ಕಟಿಗಿ ರಾಮಕೃಷ್ಣ, ಹೆಚ್.ಜಿ.ಗುರುದತ್, ಗುಜ್ಜಲ ಶ್ರೀನಿವಾಸ, ಗುದ್ಲಿ ಪರಶುರಾಮ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Leave a Comment