ಬ್ಯಾಂಕಿಂಗ್ ವ್ಯವಸ್ಥೆ ಸುಧಾರಣೆ

ನವದೆಹಲಿ, ಫೆ. ೧- ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಸುಧಾರಿಸಿ ಅಭಿವೃದ್ಧಿ ಮಾಡಲು ಸರ್ಕಾರ ಬದ್ಧವಾಗಿದ್ದು, ಬ್ಯಾಂಕ್‌ಗಳ ಹೂಡಿಕೆದಾರರಿಗೆ ವಿಮಾ ಭದ್ರತೆಯನ್ನು ಹೆಚ್ಚಳ ಮಾಡಲಾಗಿದ್ದು, ಬ್ಯಾಂಕ್‌ಗಳಲ್ಲಿ ಹಣ ಠೇವಣಿ ಇಟ್ಟವರು ಭಯಪಡುವ ಅಗತ್ಯವಿಲ್ಲ ಎಂದು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಭರವಸೆ ನೀಡಿದರು.
ಕೇಂದ್ರದ ಈ ಸಾಲಿನ ಬಜೆಟ್‌ನಲ್ಲಿ ಬ್ಯಾಂಕಿಂಗ್ ಕ್ಷೇತ್ರದ ಸುಧಾರಣೆಗೆ ಸರ್ಕಾರ ಬದ್ಧವಾಗಿದೆ. ಬ್ಯಾಂಕ್‌ಗಳ ಠೇವಣಿ ವಿಮಾ ಮೊತ್ತವನ್ನು ೧ ಲಕ್ಷದಿಂದ ೫ ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ ಎಂದರು.
ಎನ್‌ಬಿಎಫ್‌ಸಿಗಳ ಬಂಡವಾಳ ಮರು ಬಂಡವಾಳೀಕರಣಕ್ಕೂ ಸರ್ಕಾರ ಒತ್ತು ನೀಡಿದೆ ಎಂದರು. ವಾಣಿಜ್ಯ ಬ್ಯಾಂಕ್‌ಗಳ ಮೇಲೆ ನಿಗಾ ವಹಿಸಲಾಗಿದೆ. ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ೩.೫೦ ಲಕ್ಷ ಕೋಟಿಯನ್ನು ಬಜೆಟ್‌ನಲ್ಲಿ ಒದಗಿಸಲಾಗಿದೆ ಎಂದು ಹೇಳಿದರು.
ಖಾಸಗೀಕರಣ
ಐಡಿಬಿಐ ಬ್ಯಾಂಕ್‌ನ್ನು ಸಂಪೂರ್ಣ ಖಾಸಗೀಕರಣಗೊಳಿಸಲು ತೀರ್ಮಾನಿಸಲಾಗಿದೆ ಎಂದು ಅವರು ಪ್ರಕಟಿಸಿದರು. ಬ್ಯಾಂಕ್‌ಗಳಿಂದ ಠೇವಣಿದಾರರಿಗೆ ಎಲ್ಲ ಭದ್ರತೆ ಒದಗಿಸಲಾಗುವುದು. ಠೇವಣಿದಾರರು ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು.

Leave a Comment