ಬ್ರಹ್ಮಶ್ರೀ ನಾರಾಯಣಗುರು ಜಯಂತಿ 27 ರಂದು

ಕಲಬುರಗಿ ಆ 25: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತೋತ್ಸವವನ್ನು ಆಗಸ್ಟ್ 27 ರಂದು ಮಧ್ಯಾಹ್ನ 1 ಗಂಟೆಗೆ ಡಾ.ಎಸ್ ಎಂ ಪಂಡಿತರಂಗಮಂದಿರದಲ್ಲಿ  ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಡಳಿತ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತೋತ್ಸವ ಸಮಿತಿ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ . ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅಧ್ಯಕ್ಷತೆ ವಹಿಸುವರು . ಶಹಾಪುರ ಸರಕಾರಿ ಕಾಲೇಜಿನ ಉಪನ್ಯಾಸಕಿ ಹಣಮಂತಿ ಬಿ ಗುತ್ತೇದಾರ ಉಪನ್ಯಾಸ ನೀಡುವರು ಎಂದು ಸಮಿತಿ ಅಧ್ಯಕ್ಷ ರಮೇಶ ಗುತ್ತೇದಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಂದು ಬೆಳಿಗ್ಗೆ 10.30 ಕ್ಕೆ ಸರದಾರ ವಲ್ಲಭಭಾಯಿ ಪಟೇಲ ವೃತ್ತದಿಂದ ಕಲಾತಂಡಗಳೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರದ ಮೆರವಣಿಗೆ  ರಂಗಮಂದಿರದವರೆಗೆ ನಡೆಯಲಿದೆ.ಕಾರ್ಯಕ್ರಮದಲ್ಲಿ  ಜನಪ್ರತಿನಿಧಿಗಳು ,ಆರ್ಯಈಡಿಗ ಸಮಾಜದ ಗಣ್ಯರು,ಸರಕಾರದ ಉನ್ನತ ಅಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿರುವರು ಎಂದರು.

Leave a Comment