ಬ್ರಿಟನ್ ಪಿಎಂ ಬೋರಿಸ್‌ಗೆ ಕೊರೊನಾ ಸೋಂಕು

ಲಂಡನ್, ಏ ೬- ಇಂಗ್ಲೆಂಡ್ ದೇಶದ ಪ್ರಧಾನಿ ಬೋರಿಸ್ ಜಾನ್ಸನ್‌ಗೂ ಕೊರೊನಾ ಸೋಂಕು ತಗುಲಿದೆ. ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಿದಾಗ ವೈರಾಣು ತಗುಲಿರುವುದು ಖಚಿತಪಟ್ಟಿದೆ ಎಂದು ಪ್ರಧಾನಿ ಸಚಿವಾಲಯ ತಿಳಿಸಿದೆ.

೫೫ ವರ್ಷದ ಬೋರಿಸ್ ಜಾನ್ಸನ್ ಮಾರ್ಚ್. ೨೭ ರಂದು ತಮಗೆ ಕೋವಿಡ್ -೧೯ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ ಎಂದು ಸ್ವತಃ ಘೋಷಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಏಳು ದಿನಗಳ ಕಾಲ ಸ್ವಯಂಪ್ರೇರಿತರಾಗಿ ಡೌನಿಂಗ್ ಸ್ಟ್ರೀಟ್‌ನಲ್ಲಿರುವ ಪ್ರತ್ಯೇಕವಾಗಿದ್ದರು.

ಒಂದು ವಾರಗಳ ಕಾಲ ಅವರು ಚೇತರಿಸಿಕೊಂಡು ಮತ್ತೆ ಕೆಲಸಕ್ಕೆ ಮರಳಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ದೇಹದ ತಾಪಮಾನ ಕಡಿಮೆಯಾಗಿರಲಿಲ್ಲ. ಈ ಹಿನ್ನೆಲೆಯಲಿ ಮನೆಯಲ್ಲೇ ಉಳಿದು ಕೆಲಸ ನಿರ್ವಹಿಸುತ್ತಿದ್ದರು. ದೇಹದ ತಾಪಮಾನ ಹೆಚ್ಚಿರುವುದು ಕೊರೋನಾ ಸೋಂಕಿನ ರೋಗದ ಗುಣ ಲಕ್ಷಣವಾಗಿದ್ದು, ಹಠಾತ್ತನೆ ಆಸ್ಪತ್ರೆಗೆ ದಾಖಲಾಗಿದ್ದರು.

ವೈದ್ಯರ ಸಲಹೆಯ ಮೇರೆಗೆ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಅವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಇಂದು ರಾತ್ರಿ ಪರೀಕ್ಷೆಗಳಿಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಏಕೆಂದರೆ ಪ್ರಧಾನ ಮಂತ್ರಿಗಳಿಗೆ ವೈರಸ್ ಧನಾತ್ಮಕ ಪರೀಕ್ಷೆ ನಡೆಸಿದ ೧೦ ದಿನಗಳ ನಂತರವೂ ಕೊರೋನಾ ವೈರಸ್‌ನ ನಿರಂತರ ರೋಗ ಲಕ್ಷಣಗಳು ಕಂಡು ಬರುತ್ತಿವೆ ಎಂದು ಪ್ರಧಾನಿ ಸಚಿವಾಲಯ ತಿಳಿಸಿದೆ.

ಬೋರಿಸ್ ಜಾನ್ಸನ್ ನನ್ನ ಸ್ನೇಹಿತ. ಮಹಾನ್ ಸಂಭಾವಿತ ವ್ಯಕ್ತಿ, ಶ್ರೇಷ್ಠ ನಾಯಕ. ಕೊರೊನಾ ಕಾರಣಕ್ಕೆ ಅವರನ್ನು ಇಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅವರು ಶೀಘ್ರ ಗುಣಮುಖರಾಗುತ್ತಾರೆ ಎಂಬ ಭರವಸೆ ತಮಗಿದ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬ್ರಿಟನ್ ಪ್ರಧಾನಿಗೆ ಕಳುಹಿಸುರುವ ಸಂದೇಶದಲ್ಲಿ ತಿಳಿಸಿದ್ದಾರೆ.

ಕೊರೊನಾ ಸೋಂಕಿಗೆ ಇಡೀ ವಿಶ್ವವೇ ಬೆಚ್ಚಿಬಿದ್ದಿದೆ. ವಿಶ್ವದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ ೬೪,೭೨೯ಕ್ಕೆ ಏರಿಕೆಯಾಗಿದ್ದು, ೧೨,೦೨,೨೪೨ ಜನರು ಸೋಂಕು ತಗುಲಿದೆ.  ಅತಿಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿರುವ ದೇಶಗಳಲ್ಲಿ ವಿಶ್ವದ ಹಿರಿಯಣ್ಣ ಅಮೆರಿಕ ಮೊದಲ ಸ್ಥಾನದಲ್ಲಿದೆ. ಕೊರೋನಾ ವೈರಸ್ ಆರ್ಭಟಕ್ಕೆ ಅಮೆರಿಕ ತಲ್ಲಣಗೊಂಡಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚುತ್ತಿರುವುದು ತೀವ್ರ ಆತಂಕ ತಂದೊಡ್ಡಿದೆ.

Leave a Comment