ಭರತನೂರ ಗ್ರಾಮದಲ್ಲಿ ಡೆಂಗ್ಯೂ ಜ್ವರ

ಕಲಬುರಗಿ,ಜೂ.19-ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಭರತನೂರ ಗ್ರಾಮದಲ್ಲಿ ಸುಮಾರು 24 ಜನರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು, ಅದರಲ್ಲಿ ಓರ್ವ ಬಾಲಕನಿಗೆ ಡೆಂಗ್ಯೂ ಜ್ವರ ಇರುವುದು ದೃಢಪಟ್ಟಿದೆ.
ತೀವ್ರ ಜ್ವರದಿಂದ ಬಳಲುತ್ತಿದ್ದ 10 ಜನರ ರಕ್ತದ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ತೀವ್ರ ಜ್ವರದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅಭಿಷೇಕ ಎಂಬ ಬಾಲಕನಿಗೆ ಡೆಂಗ್ಯೂಜ್ವರ ಇರುವುದು ಖಚಿತವಾಗಿದೆ. ಕೆಲವರು ನಗರದ ಸೇಡಂ ರಸ್ತೆಯ ಇ.ಎಸ್.ಐ.ಸಿ. ಆಸ್ಪತ್ರೆ, ಇನ್ನೂ ಕೆಲವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭರತನೂರ ಗ್ರಾಮಕ್ಕೆ ವೈದ್ಯರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, 10 ಜನರ ರಕ್ತದ ಮಾದರಿಯ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ ಅಭಿಷೇಕ ಎಂಬ ಡೆಂಗ್ಯೂ ಜ್ವರ ಕಾಣಿಸಿಕೊಂಡಿರುವುದು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವರಾಜ ಸಜ್ಜನಶೆಟ್ಟಿ ಅವರು “ಸಂಜೆವಾಣಿ”ಗೆ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ ಯಾಕಾಪುರ ಅವರು ಬಸವೇಶ್ವರ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂಜ್ವರದಿಂದ ಬಳಲುತ್ತಿರುವ ಬಾಲಕನ ಆರೋಗ್ಯ ವಿಚಾರಿಸದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವರಾಜ ಸಜ್ಜನಶೆಟ್ಟಿ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Comment