ಭಾನುವಾರದ ಲಾಕ್ ಡೌನ್ ನಲ್ಲಿ ಕಟ್ಟುನಿಟ್ಟಿನ ಕ್ರಮಗಳು ಅನ್ವಯ: ಯಡಿಯೂರಪ್ಪ

ಬೆಂಗಳೂರು, ಮೇ 23 -ಕೊರೋನಾ ವೈರಸ್ ಸೋಂಕು ನಿಯಂತ್ರಣ ಉದ್ದೇಶದಿಂದ ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ಸರ್ಕಾರದ ನಿಯಮಗಳನ್ನು ಪಾಲಿಸದಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಸಂಪೂರ್ಣ ಲಾಕ್‌ಡೌನ್ ನಲ್ಲಿ ಕಟ್ಟುನಿಟ್ಟಿನ ನಿಯಮಗಳು ಜಾರಿಯಾಗಲಿವೆ. ತೀರಾ ಅಗತ್ಯವಿಲ್ಲದೆ ರಸ್ತೆಗಳಲ್ಲಿ ಸಾರ್ವಜನಿಕರು ಸಂಚರಿಸಬಾರದು. ಎಲ್ಲಾ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದಿದ್ದಾರೆ.

ಸರ್ಕಾರಿ ವಾಹನಗಳು ಸೇರಿದಂತೆ ಬಸ್, ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ, ಲಾಕ್‌ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕೊರೋನಾ ಸೋಂಕು ತಡೆಗಟ್ಟುವಲ್ಲಿ ಸಾರ್ವಜನಿಕರು ಸರ್ಕಾರದೊಂದಿಗೆ ಸಹಕರಿಸಬೇಕು. ಎಲ್ಲಾ ವಾಣಿಜ್ಯ ಮಳಿಗೆಗಳು ಹಾಗೂ ವಾಹನ ಸಂಚಾರ ಸ್ಥಗಿತಗೊಳಿಸುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್‌ರಾವ್ ಮಾತನಾಡಿ, ಬೆಂಗಳೂರು ನಗರದಲ್ಲಿ ಸಕಾರಣವಿಲ್ಲದೆ ರಸ್ತೆಯಲ್ಲಿ ತಿರುಗಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಸೋಮವಾರ ಬೆಳಗ್ಗೆ ೭ ಗಂಟೆವರೆಗೆ ಮನೆಯಿಂದ ಯಾರೂ ಹೊರಗೆ ಬರಬಾರದು ಎಂದು ಹೇಳಿದ್ದಾರೆ.

Leave a Comment