ಭಾರತ ಬಂದ್ : ಮುಂಡಗೋಡದಲ್ಲಿ ಮಿಶ್ರ ಪ್ರತಿಕ್ರಿಯೆ

ಮುಂಡಗೋಡ.ಸೆ11: ಭಾರತ ಬಂದ್ ಹಿನ್ನೆಲೆಯಲ್ಲಿ ಮುಂಡಗೋಡದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಸ್ಥಗಿತಗೊಂಡಿತ್ತು. ಶಾಲಾ-ಕಾಲೇಜು ಬಂದ್ ಆಗಿತ್ತು. ಹೊಟೇಲ್‍ಗಳು, ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದು ವ್ಯಾಪಾರ, ವಹಿವಾಟು ನಡೆಸಿದವು. ಇಂದು ವಾರದ ಸಂತೆ ಎಂದಿನಂತೆ ನಡೆದವು.
ಮುಂಡಗೋಡ ತಾಲೂಕಾ ಬ್ಲಾಕ್ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ, ನಂತರ ಮುಂಡಗೋಡ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಕೇಂದ್ರದ ಬಿಜೆಪಿ ಸರ್ಕಾರ ತನ್ನ 5 ವರ್ಷದ ಆಡಳಿತದಲ್ಲಿ ಪೆಟ್ರೋಲ್, ಡಿಸೇಲ್, ಸೀಮೆ ಎಣ್ಣೆ, ಅಡಿಗೆ ಅನಿಲ ಮತ್ತು ಆಹಾರ ಪದಾರ್ಥಗಳ ಬೆಲೆಯು ಮನಬಂದಂತೆ ಏರಿಸಿದ್ದು, ಜನಸಾಮಾನ್ಯರ ಮೇಲೆ ಹೊರಲಾರದ ಭಾರ ಹಾಕಿರುತ್ತದೆ. ಬೆಲೆ ಏರಿಕೆಯನ್ನು ತಡೆಹಿಡಿಯಲು ಆಗದ ಬಿಜೆಪಿಯ ಮೋದಿ ಸರಕಾರ ಕೂಡಲೇ ರಾಜಿನಾಮೆ ಕೊಡುವಂತೆ ಕಾಂಗ್ರೆಸ ಪಕ್ಷ ಒತ್ತಾಯಿಸುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಗೌಡ ಪಾಟೀಲ, ಮುಖಂಡರಾದ ಎಚ್.ಎಮ್.ನಾಯ್ಕ, ಕೃಷ್ಣ ಹಿರೇಹಳ್ಳಿ ಮತ್ತು ಜೆಡಿಎಸ್‍ನ ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ ಕುಟ್ರಿ, ಜೆಡಿಎಸ್ ಕ್ಷೇತ್ರಾಧ್ಯಕ್ಷ ಅರುಣಕುಮಾರ ಗೊಂದಳೆ ಮುಂತಾದವರಿದ್ದರು.

Leave a Comment