ಭೀಕರ ಅಪಘಾತಕ್ಕೆ ಇಬ್ಬರ ಬಲಿ

ಬಸ್ಸಿಗೆ ಬೈಕ್ ಡಿಕ್ಕಿ  |  ಸುಳ್ಯ ಸಮೀಪ ನಡೆದ ಘಟನೆ

ಮಂಗಳೂರು, ಜ.೧೧- ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಕೊಯಿನಾಡು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ. ಮೃತರನ್ನು ಜಾರ್ಖಂಡ್ ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಬೈಕ್ ಜಾರ್ಖಂಡ್ ನೊಂದಣಿಯದ್ದಾಗಿದ್ದು ಅಪಘಾತದ ತೀವ್ರತೆಗೆ ನಜ್ಜುಗುಜ್ಜಾಗಿದೆ.

ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಬೈಕ್ ಸವಾರರು ಕೊಯಿನಾಡಿನಲ್ಲಿ ಸರಕಾರಿ ಬಸ್‌ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದರು. ಘಟನೆಯಿಂದಾಗಿ ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಬೈಕ್ ಸವಾರರ ಅತೀವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಘಟನೆಗೆ ಕಾರಣವೆಂದು ಶಂಕಿಸಲಾಗಿದೆ.

Leave a Comment