ಮಂಗಳಮುಖಿಯರಿಗೆ ಮಿಡಿದ ರಾಧಿಕಾ ಕುಮಾರಸ್ವಾಮಿ‌ ಹೃದಯ

ಬೆಂಗಳೂರು, ಏ.9 – ಕೊರೊನಾ ಸೋಂಕು ನಿಯಂತ್ರಿಸಲು ಲಾಕ್ ಡೌನ್ ಆದೇಶ ಹೇರಿರುವ ಹಿನ್ನೆಲೆಯಲ್ಲಿ ಬಡವರು, ನಿರ್ಗತಿಕರು, ಕಾರ್ಮಿಕರು ಸಂಕಷ್ಟ ಕ್ಕೆ ಸಿಲುಕಿದ್ದಾರೆ‌.
ಈಗಾಗಲೇ ಸ್ಯಾಂಡಲ್ ವುಡ್ ನ ಹಲವು ನಟ- ನಟಿಯರು ತಮ್ಮ ಕೈಲಾದ ಸಹಾಯ‌ ಮಾಡುತ್ತಿದ್ದು,
ಈ ನಿಟ್ಟಿನಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಕೂಡ ನೆರವಾಗುತ್ತಿದ್ದಾರೆ.
ರಾಧಿಕಾ ಅವರು ಬಡವರಿಗೆ ವಿಶೇಷವಾಗಿ ಮಂಗಳಮುಖಿಯರಿಗೆ ಸಹಾಯ ಮಾಡುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಮಂಗಳಮುಖಿಯರು ಹಾಗೂ ಬಡವರನ್ನು ಹುಡುಕಿಕೊಂಡು ಹೋಗಿ ಅಕ್ಕಿ, ಬೇಳೆ ಸೇರಿದಂತೆ ವಿವಿಧ ರೀತಿಯ ಆಹಾರ ಸಾಮಗ್ರಿಗಳನ್ನು ದಾನ ಮಾಡುವ ಮೂಲಕ ಅವರ ಕಷ್ಟಕ್ಕೆ ನೆರವಾಗುತ್ತಿದ್ದಾರೆ.
ರಾಧಿಕಾ ಅವರು, ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ವಿವಿಧ ರೀತಿಯ ಆಹಾರ ಸಾಮಾಗ್ರಿಗಳನ್ನು ಸ್ವತಃ ಅವರೇ ಕೈಯಾರೇ ಹಂಚಿದ್ದಾರೆ. ಈ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ವಿಡಿಯೋ ಪೋಸ್ಟ್ ಮಾಡಿರುವ ಅವರು, ನಾವೆಲ್ಲರೂ ಮಾನವರು, ಇಂತಹ ಸಮಯದಲ್ಲಿ ದುರ್ಬಲರಿಗೆ, ಅಗತ್ಯವಿರುವವರಿಗೆ ಸಹಾಯ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಭಾವಿಸುತ್ತೇನೆ. ಹೀಗಾಗಿ ಬೆಂಗಳೂರಿನಲ್ಲಿ ಅಗತ್ಯವಿರುವವರಿಗೆ ಸ್ವಯಂ ಪ್ರೇರಣೆಯಿಂದ ಆಹಾರ ಪದಾರ್ಥ ವಿತರಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ರಾಧಿಕಾ ಕುಮಾರಸ್ವಾಮಿ ಅವರು, ಮಾಗಡಿ ರಸ್ತೆ, ಕೆಂಗೇರಿ, ನಾಯಂಡಹಳ್ಳಿ ಮುಂತಾದ ಏರಿಯಾಗಳಲ್ಲಿ ದಿನಸಿ ವಿತರಿಸಿದ್ದು, 1200ಕ್ಕೂ ಹೆಚ್ಚು ಮನೆಗಳಿಗೆ ಹಂಚಿಕೆ ಮಾಡಿದ್ದಾರೆ.

Leave a Comment