ಮಂಗಳೂರು ಬಾಂಬ್ ಪ್ರಕರಣ: ಶಂಕಿತ ಆರೋಪಿ ಪೊಲೀಸರಿಗೆ ಶರಣು

ಬೆಂಗಳೂರು, ಜ 22- ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಇಟ್ಟಿದ್ದನೆನ್ನಲಾದ ಶಂಕಿತ ವ್ಯಕ್ತಿ ಪೊಲೀಸರಿಗೆ ಶರಣಾಗಿದ್ದಾನೆ.
ಶಂಕಿತ ಆರೋಪಿ ಡಿಜಿಪಿ ನೀಲಮಣಿ ಅವರ ಮುಂದೆ ಶರಣಾಗಿದ್ದಾನೆ ಎಂದು ಉನ್ನತ ಮೂಲಗಳು ಹೇಳಿವೆ.

ಆರೋಪಿಯನ್ನು ಉಡುಪಿ ನಿವಾಸಿ ಆದಿತ್ಯ ರಾವ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಹಲಸೂರು ಗೇಟ್ ಪೊಲೀಸರು ವಿಚಾರಣೆಗಾಗಿ ಕರೆದೊಯ್ದಿದ್ದು, ಅಲ್ಲಿ ಅವರನ್ನು ತೀವ್ರವಾಗಿ ವಿಚಾರಣೆ ಮಾವುತ್ತಿದ್ದಾರೆ ಎಂದೂ ಮೂಲಗಳು ತಿಳಿಸಿವೆ. ಅವರ ಪ್ರಕಾರ, ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಸ್ಫೋಟಕ ಸಾಧನವನ್ನು ಇಟ್ಟಿದ್ದನ್ನು ಆತ ಒಪ್ಪಿಕೊಂಡಿದ್ದಾನೆ , ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಕಿಯಾಲ್) ಉದ್ಯೋಗ ನಿರಾಕರಿಸಿದ್ದಕ್ಕಾಗಿ ಸೇಡು ತೀರಿಸಿಕೊಳ್ಳುವುದಕ್ಕೆ ಪ್ರತಿಯಾಗಿ ಇದನ್ನು ಮಾಡಿರುವುದಾಗಿ ಹೇಳಿದ್ದಾನೆ ಎನ್ನಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಡಲಾಗಿದೆ ಎಂದು ತಿಳಿಸಿ ಪೊಲೀಸರಿಗೆ ವಂಚನೆ ಮಾಡಿ ದಾರಿ ತಪ್ಪಿಸಿದ್ದ ಅವನನ್ನು ಬೆಂಗಳೂರು ಪೊಲೀಸರು ಈ ಹಿಂದೆ ಬಂಧಿಸಿದ್ದರು.ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಆದಿತ್ಯ ರಾವ್ ಅವರನ್ನು ಬೆಂಗಳೂರು ಪೊಲೀಸರು ವಶಕ್ಕೆ ತೆಗೆದುಕೊಂಡು ಪೂರ್ಣ ವಿಚಾರಣೆ ಮಾಡುತ್ತಿದ್ದಾರೆ ಎಂದು ಹೇಳಿದರು. ತನಿಖೆಗೆ ಮಂಗಳೂರು ಪೊಲೀಸರು ಸಹ ಸೇರಿಕೊಳ್ಳುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

Leave a Comment