ಮಟಕಾ ನಂಬರ್ ಬರೆದುಕೊಳ್ಳುತ್ತಿದ್ದ ವ್ಯಕ್ತಿ ಬಂಧನ

 

ಕಲಬುರಗಿ,ಜು.31-ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮೀಪೂರವಾಡಿ ಗ್ರಾಮದ ಹನುಮಾನ ದೇವರ ಗುಡಿಯ ಮುಂದಿನ ಕಟ್ಟೆಯ ಮೇಲೆ ಮಟಕಾ ನಂಬರ್ ಬರೆದುಕೊಳ್ಳುತ್ತಿದ್ದ ಆನಂದ ಭೀಮಯ್ಯ ಆಂದೇಲಿ ಎಂಬಾತನನ್ನು ಪೊಲೀಸರು ಬಂಧಿಸಿ 1640 ರೂಪಾಯಿ ನಗದು ಮಟಕಾ ಚೀಟಿ ಜಪ್ತಿ ಮಾಡಿದ್ದಾರೆ.

ಶಹಾಬಾದ ಡಿಎಸ್ಪಿ, ಚಿತ್ತಾಪುರ ಸಿಪಿಐ ಮಾರ್ಗದರ್ಶನದಲ್ಲಿ ವಾಡಿ ಪಿಎಸ್ಐ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Comment