ಮಡಿವಾಳ ಸಮಾಜದ ಪರಿಶಿಷ್ಟ ಜಾತಿ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

ಚಳ್ಳಕೆರೆ ನ.6. ಕಳೆದ ಹಲವಾರು ವರ್ಷಗಳಿಂದ ಮಡಿವಾಳ ಸಮಾಜ ನಿರೀಕ್ಷಿತ ಪ್ರಗತಿಯನ್ನು ಸಾಧಿಸಲು ಮೀಸಲಾತಿ ದೊರೆಯದೇ ಇರುವುದು ಕಾರಣವಾಗಿದ್ದು, ಈ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರ ಕೂಡಲೇ ಈ ಸಮುದಾಯಕ್ಕೆ ಪರಿಶಿಷ್ಟ ಜಾತಿ ಮೀಸಲಾತಿ ನೀಡುವಂತೆ ನ.13ರಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಮಡಿವಾಳ ಯುವಕ ಸಂಘದ ಗೌರವಾಧ್ಯಕ್ಷ, ನಗರಸಭಾ ಸದಸ್ಯ ಆರ್.ರವಿಕುಮಾರ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯನ್ನು ತಾಲ್ಲೂಕು ಅಧ್ಯಕ್ಷ ಕರೀಕೆರೆ ಎ.ನಾಗರಾಜು ಮಾಹಿತಿ ನೀಡಿ, ಚಿತ್ರದುರ್ಗ ಮಡಿವಾಳ ಗುರುಪೀಠದ ಬಸವ ಮಾಚಿದೇವ ಮಹಾಸ್ವಾಮಿಗಳ ನೇತೃತ್ವದಲ್ಲಿ ನ.13ರ ಸೋಮವಾರ ಬೆಳಗ್ಗೆ 10ಕ್ಕೆ ಚಿತ್ರದುರ್ಗ ನೀಲಕಠೇಶ್ವರ ದೇವಸ್ಥಾನದಿಂದ ಬೃಹತ್ ಪ್ರತಿಭಟನಾ ಮೆರವಣೆಗೆ ಗೆಯನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಿಂದ ಸಮುದಾಯದ ಮುಖಂಡರು ಮತ್ತು ಯುವಕರು ಆಗಮಿಸಿ ಪ್ರತಿಣಟನೆಯನ್ನು ಯಶಸ್ಸಿಗೊಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಮಡಿವಾಳ ಯುವಕ ಸಂಘದಿಂದ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಸಮುದಾಯವನ್ನು ಜಾಗೃತಗೊಳಿಸಲಾಗುವುದು ಎಂದರು.
ದೇಶದ 17 ರಾಜ್ಯಗಳಲ್ಲಿ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸಿ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ಅದರಂತೆ ರಾಜ್ಯದಲ್ಲೂ ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸಿ ಆರ್ಥಿಕ, ಶೈಕ್ಷಣ ಕ, ರಾಜಕೀಯ, ಸಾಮಾಜಿಕ ಸ್ಥಾನಮಾನಗಳನ್ನು ನೀಡಬೇಕಿತ್ತು. ಜನಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯಿಂದ ಇಂದಿಗೂ ಯಾವುದೇ ಸೌಲಭ್ಯಗಳಿಲ್ಲದೆ ಹೀನಾಯ ಬದುಕು ನಡೆಸಿಕೊಂಡು ಬರುತ್ತಿದ್ದೇವೆ. ಮೂಲ ಸೌಲಭ್ಯ ಪಡೆಯುವ ಉದ್ದೇಶದಿಂದ ಮಡಿವಾಳ ಗುರುಪೀಠದ ಬಸವ ಮಾಚಿದೇವ ಮಹಾಸ್ವಾಮಿಗಳು ಮತ್ತು ರಾಜ್ಯದ ಹಿರಿಯ ಮಾರ್ಗದರ್ಶನದಲ್ಲಿ ನ.13 ರಂದು ಜಿಲ್ಲಾಧಿಕಾರಿಗಳಿಗೆ ಪರಿಶಿಷ್ಟ ಜಾತಿ ಸೇರ್ಪಡೆಗೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಪ್ರತಿಭಟಿಸಿ ಮನವಿ ನೀಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಆರ್.ಯನ್ನಪ್ಪ(ಹಾಲಿನಬಾಬು), ಸಹ ಕಾರ್ಯದರ್ಶಿ ಎನ್.ವಿಶ್ವನಾಥ, ಖಜಾಂಚಿ ಎಲ್‍ಐಸಿ ಬಿ.ಮೈಲಾರಪ್ಪ, ಎಚ್.ತಿಪ್ಪೇಸ್ವಾಮಿ, ಎಂ.ದೀಪಕ್, ಎನ್.ತಿಪ್ಪೇಸ್ವಾಮಿ, ಟಿ.ಎಂ.ರಮೇಶ್, ಹನುಮಂತರಾಯ ಮುಂತಾದವರು ಉಪಸ್ಥಿತರಿದ್ದರು.

Leave a Comment