ಮತದಾರರಿಗೆ ವಿವಿಪ್ಯಾಟ್-ಇವಿಎಂ ಪ್ರಾತ್ಯಕ್ಷಿಕೆ

ತುಮಕೂರು, ಮಾ. ೧೪- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಇಂದು ಬೆಳಿಗ್ಗೆ ತುಮಕೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ವಾಯು ವಿಹಾರಿಗಳಿಗೆ ಮತದಾನ ಕುರಿತು ವಿವಿಪ್ಯಾಟ್ ಮತ್ತು ಇವಿಎಂ ಯಂತ್ರಗಳ ಪ್ರಾತ್ಯಕ್ಷಿಕೆ ನೀಡಲಾಯಿತು.

ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ ವಿವಿಪ್ಯಾಟ್ ಮತ್ತು ಇವಿಎಂ ಯಂತ್ರಗಳನ್ನು ಬಳಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮತದಾರರು ಮತದಾನ ಮಾಡುವ ವೇಳೆ ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂಬ ಉದ್ದೇಶದಿಂದ ಈ ಎರಡು ಯಂತ್ರಗಳ ಬಳಕೆ ಬಗ್ಗೆ ಸಾರ್ವಜನಿಕರಿಗೆ ಸ್ವೀಪ್ ಸಮಿತಿ ಸದಸ್ಯರು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿಕೊಟ್ಟರು.

ವಾಯುವಿಹಾರಿಗೆ ಈ ಯಂತ್ರಗಳ ಬಗ್ಗೆ ತಿಳುವಳಿಕೆ ಮೂಡಿಸಿದ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ. ಸಿಇಓ ಶುಭಕಲ್ಯಾಣ್, ಮತದಾರರು ಮತದಾನ ಮಾಡುವ ಸಂದರ್ಭದಲ್ಲಿ ಗೊಂದಲಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಮುಂಜಾಗ್ರತೆಯಾಗಿಯೇ ಈ ಯಂತ್ರಗಳ ಪ್ರಾತ್ಯಕ್ಷಿಕೆ ನೀಡಲಾಗುತ್ತಿದ್ದು, ಪ್ರತಿಯೊಬ್ಬರು ಈ ಯಂತ್ರಗಳ ಬಳಕೆ ಬಗ್ಗೆ ತಿಳಿದುಕೊಂಡು ಇತರರಿಗೂ ತಿಳಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸ್ವೀಪ್ ಸಮಿತಿಯ ಮಾಂಕಾಳಪ್ಪ, ರಾಜಶೇಖರ್, ರಿಜ್ವಾನ್ ಪಾಷ, ಜ್ಯೋತಿಗಣೇಶ್, ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

Leave a Comment