ಮತ್ತೆ ಸಿದ್ದು ಸಿಎಂ – ಎಂ.ಬಿ.ಪಾಟೀಲ್ ಭವಿಷ್ಯ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಭಾಗ್ಯಗಳ ಸರ್ಕಾರವಾದಂತ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಮತ್ತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬುದಾಗಿ ಮಾಜಿ ಸಚಿವ ಎಂ ಬಿ ಪಾಟೀಲ್ ಭವಿಷ್ಯ ನುಡಿದಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್ ಈ ತಿಂಗಳ ಅಂತ್ಯದೊಳಗೆ ಮತ್ತೆ ಬರಲಿದೆ ಭಾಗ್ಯಗಳ ಸರ್ಕಾರ. ಇತ್ತೀಚಿಗೆ ಸರ್ಕಾರ ಇದೆಯೋ ಇಲ್ಲವೋ ಎಂದಂತಾಗಿದೆ. ಸೂಕ್ಷ್ಮವಾಗಿ ಗಮನಿಸಿದರೇ ಮತ್ತೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ ಎಂದು ಹೇಳಿದ್ದಾರೆ.
ಈಗಾಗಲೇ ಇದೇ ಮಾತನ್ನು ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಹೇಳಿದ್ದಾರೆ. ಇದನ್ನು ಅನೇಕರು ಸಿದ್ದರಾಮಯ್ಯ ಸಿಎಂ ಆಗುವಂತ ಹಗಲು ಕನಸು ಕಾಡುತ್ತಿದ್ದಾರೆ. ಇದು ಖಂಡಿತವಾಗಿ ಸಾಧ್ಯವೇ ಇಲ್ಲ ಎಂಬುದಾಗಿ ಟೀಕಿಸಿದ್ದರು. ಆದ್ರೇ ಇದೀಗ ಕಾಂಗ್ರೆಸ್ ನ ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿರುವ ಈ ಭವಿಷ್ಯ ನಿಜವಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

Leave a Comment