ಮದ್ಯಪಾನ ಮಾಡಿ ವಾಹನ ಚಾಲನೆ: 14 ಮಂದಿ ಚಾಲನಾ ಪರವಾನಗಿ ಅಮಾನತ್ತು

ತುಮಕೂರು, ಸೆ. ೭- ಜಿಲ್ಲೆಯಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಚಾಲಕರುಗಳ ಮೇಲೆ ಕಾನೂನು ಕ್ರಮ ಕೈಗೊಂಡು ಅವರ ಚಾಲನಾ ಪರವಾನಗಿಗಳನ್ನು ತಾತ್ಕಾಲಿಕವಾಗಿ ಅಮಾನತ್ತುಗೊಳಿಸಲು ಕೋರಿ ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಕಛೇರಿಗೆ ಕಳುಹಿಸಿದ್ದು, ಈ ಪೈಕಿ ಈಗಾಗಲೇ 14 ಜನರ ಚಾಲನಾ ಪರವಾನಗಿಗಳನ್ನು ಅಮಾನತ್ತುಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ದಿವ್ಯಾಗೋಪಿನಾಥ್ ತಿಳಿಸಿದ್ದಾರೆ.

38 ಚಾಲಕರುಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸಾರ್ವಜನಿಕರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದಲ್ಲಿ ಅವರುಗಳ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವುದಲ್ಲದೆ ಅವರ ಚಾಲನಾ ಪರವಾನಗಿಗಳನ್ನು ಸಹ ಅಮಾನತ್ತುಪಡಿಸಿಕೊಳ್ಳಲಾಗುವುದು.

ಆದ್ದರಿಂದ ಸಾರ್ವಜನಿಕರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡದಂತೆ ಹಾಗೂ ಸಾರಿಗೆ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ವಾಹನ ಚಾಲನೆ ಮಾಡಿ ಅಪಘಾತಗಳನ್ನು ತಡೆಗಟ್ಟುವಂತೆ ಅವರು ಮನವಿ ಮಾಡಿದ್ದಾರೆ.

Leave a Comment